Posts

Showing posts from February, 2025

ರಾಜ್ಯಾದ್ಯಂತ ಮಾ.2ರಿಂದ ರಮಝಾನ್ ಉಪವಾಸ ಆರಂಭ : ಮೌಲಾನಾ ಮಕ್ಸೂದ್ ಇಮ್ರಾನ್

Image
ರಾಜ್ಯಾದ್ಯಂತ ಮಾ.2ರಿಂದ ರಮಝಾನ್ ಉಪವಾಸ ಆರಂಭ : ಮೌಲಾನಾ ಮಕ್ಸೂದ್ ಇಮ್ರಾನ್ ಬೆಂಗಳೂರು :( ಕರ್ನಾಟಕ ಸಿಟಿಝನ್ ನ್ಯೂಸ್ ವರದಿ )ಪವಿತ್ರ ರಮಝಾನ್ ಮಾಸದ ಚಂದ್ರ ದರ್ಶನವು ಶುಕ್ರವಾರ ಗೋಚರಿಸದೆ ಇರುವುದರಿಂದ ಮಾ.2ರಿಂದ ರಾಜ್ಯಾದ್ಯಂತ ಉಪವಾಸ ವ್ರತ ಆಚರಣೆ ನಡೆಸಲು ನಿರ್ಧರಿಸಲಾಗಿದೆ ಎಂದು ರಾಜ್ಯ ಚಂದ್ರದರ್ಶನ ಸಮಿತಿಯ ಸಂಚಾಲಕ ಮೌಲಾನಾ ಮಕ್ಸೂದ್ ಇಮ್ರಾನ್ ರಶಾದಿ ತಿಳಿಸಿದರು. ಶುಕ್ರವಾರ ಸಂಜೆ ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ರಾಜ್ಯ ವಕ್ಫ್ ಬೋರ್ಡ್‌ನ ಕೇಂದ್ರ ಕಚೇರಿ(ದಾರುಲ್ ಔಕಾಫ್)ಯಲ್ಲಿ ಅಮೀರೆ ಶರೀಅತ್ ಮೌಲಾನಾ ಸಗೀರ್ ಅಹ್ಮದ್ ಖಾನ್ ರಶಾದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಾಜ್ಯ ಹಾಗೂ ದೇಶದ ವಿವಿಧ ರಾಜ್ಯಗಳಲ್ಲಿ ಚಂದ್ರ ದರ್ಶನದ ಬಗ್ಗೆ ಲಭ್ಯವಾದ ಮಾಹಿತಿ ಕುರಿತು ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು. ಆಂಧ್ರಪ್ರದೇಶ, ಬಿಹಾರ, ಉತ್ತರಪ್ರದೇಶ, ತಮಿಳುನಾಡು, ಉತ್ತರಾಖಂಡ, ದಿಲ್ಲಿ ಸೇರಿದಂತೆ ವಿವಿಧ ರಾಜ್ಯಗಳು ಹಾಗೂ ನಮ್ಮ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಮಾಹಿತಿಗಳನ್ನು ತರಿಸಿಕೊಳ್ಳಲಾಗಿತ್ತು.ಎಲ್ಲಿಯೂ ಚಂದ್ರದರ್ಶನವಾದ ಮಾಹಿತಿ ಇಲ್ಲ. ಆದುದರಿಂದ, ಶನಿವಾರದಿಂದ ತರಾವೀಹ್‌ ನಮಾಝ್ ಹಾಗೂ ರವಿವಾರ ಮೊದಲ ಉಪವಾಸ ಆಚರಿಸಲಾಗುವುದು ಎಂದು ಮಕ್ಸೂದ್ ಇಮ್ರಾನ್ ತಿಳಿಸಿದರು. ಸಭೆಯಲ್ಲಿ ಮುಫ್ತಿ ಇಫ್ತಿಖಾರ್ ಅಹ್ಮದ್ ಖಾಸ್ಮಿ, ಮೌಲಾನಾ ಏಜಾಝ್ ಅಹ್ಮದ್ ನದ್ವಿ, ಮೌಲಾನಾ ಅಬ್ದುಲ್ ಖಾದಿರ್...

ಐದು ಮಂದಿ ಕುಟುಂಬಸ್ಥರನ್ನು ಹತ್ಯೆಗೈದ 23 ರ ಯುವಕ: ಕೇರಳದಲ್ಲಿ ಭಯಾನಕ ಹತ್ಯಾಕಾಂಡ

Image
ಐದು ಮಂದಿ ಕುಟುಂಬಸ್ಥರನ್ನು ಹತ್ಯೆಗೈದ 23 ರ ಯುವಕ: ಕೇರಳದಲ್ಲಿ ಭಯಾನಕ ಹತ್ಯಾಕಾಂಡ ತಿರುವನಂತಪುರಂ:  ( ಕರ್ನಾಟಕ ಸಿಟಿಝನ್ ನ್ಯೂಸ್ ವರದಿ ) ವೆಂಜಾರಮೂಟ್‌ನಲ್ಲಿ ಯುವಕನೊಬ್ಬ ತನ್ನ ಸಹೋದರ ಸೇರಿದಂತೆ ತನ್ನ ಕುಟುಂಬ ಸದಸ್ಯರು ಮತ್ತು ಪತ್ನಿಯನ್ನು ಕಡಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಪೆರುಮಾಳ ಮೂಲದ ಅಫಾನ್ (23) ಈ ಕೊಲೆ ಮಾಡಿದ್ದಾನೆ. ಆರು ಜನರನ್ನು ಕೊಂದಿರುವುದಾಗಿ ಹೇಳಿಕೊಂಡು ಆ ಯುವಕ ವೆಂಜರಮೂಡು ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾನೆ. ಪರೀಕ್ಷೆಯ ಸಮಯದಲ್ಲಿ ಐದು ಜನರು ಸಾವನ್ನಪ್ಪಿರುವುದು ಕಂಡುಬಂದಿದೆ. ಮೃತರು ಅವರ ತಂದೆಯ ತಾಯಿ ಸಲ್ಮಾ ಬೀವಿ (88), ಸಂಬಂಧಿಕರಾದ ಲತೀಫ್ (66), ಶಾಹಿದಾ (58), ಸಹೋದರ ಅಫ್ಜಾನ್ (13) ಮತ್ತು ಪತ್ನಿ ಫರ್ಜಾನಾ. ಕ್ಯಾನ್ಸರ್ ನಿಂದ ಬಳಲುತ್ತಿರುವ ಆಕೆಯ ತಾಯಿ ಶೆಮಿ, ಇರಿತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಕೊಲೆಗಳು ಮೂರು ಸ್ಥಳಗಳಲ್ಲಿ ನಡೆದಿವೆ. ಪೆರುಮಲೈನಲ್ಲಿರುವ ಅವರ ಮನೆಯಲ್ಲಿ 13 ವರ್ಷದ ಸಹೋದರ, ತಾಯಿ ಮತ್ತು ಗೆಳತಿಯನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಎಸ್.ಎನ್. ಪುರಂನ ಚುಲ್ಲಾಲಂನಲ್ಲಿ ಸಂಬಂಧಿಕರಾದ ಲತೀಫ್ ಮತ್ತು ಅವರ ಪತ್ನಿ ಶಾಹಿದಾ ಅವರನ್ನು ಕೊಲೆ ಮಾಡಲಾಯಿತು. ಲತೀಫ್ ಮೃತದೇಹ ಹಾಲ್‌ನಲ್ಲಿ ಮತ್ತು ಶಾಹಿದಾ ಮೃತದೇಹ ಅಡುಗೆ ಮನೆಯಲ್ಲಿ ಪತ್ತೆಯಾಗಿದೆ. ಇಬ್ಬರ ತಲೆಗೂ ಗುಂಡು ಹಾರಿಸಲಾಗಿತ್ತು. ಅವರ ತಂದೆಯ ತ...

ಬಿಳಿ ಜಾಂಡಿಸ್ ಕಾಯಿಲೆ: ತೀರ್ಥಹಳ್ಳಿಯ ವಿದ್ಯಾರ್ಥಿನಿ ಸಾವು..!

Image
ಬಿಳಿ ಜಾಂಡಿಸ್ ಕಾಯಿಲೆ: ತೀರ್ಥಹಳ್ಳಿಯ ವಿದ್ಯಾರ್ಥಿನಿ ಸಾವು..! ತೀರ್ಥಹಳ್ಳಿ :  ಬಿಳಿ ಜಾಂಡಿಸ್ ಕಾಯಿಲೆಯಿಂದ ಬಳಲುತ್ತಿದ್ದ ತೀರ್ಥಹಳ್ಳಿಯ ಬೆಟ್ಟಮಕ್ಕಿ ಸಹ್ಯಾದ್ರಿ ( ಐ. ಸಿ. ಎಸ್. ಸಿ ) ಶಾಲೆಯ ವಿದ್ಯಾರ್ಥಿನಿಯೋರ್ವಳು ಮೃತಪಟ್ಟಿದ್ದಾರೆ.ಐಸಿರಿ (14 ವರ್ಷ ) ಮೃತಪಟ್ಟ ದುರ್ಧೈವಿ. ಹೆಗ್ಗೋಡಿನ ಐಸಿರಿ ಎಂಟನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಕೆಲವು ದಿನಗಳಿಂದ ಬಿಳಿ ಜಾಂಡಿಸ್ ಕಾಯಿಲಿಯಿಂದ ಬಳಲುತ್ತಿದ್ದ ಇವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ನಂತರ ಕಿಡ್ನಿ ವೈಫಲ್ಯ ಸಹ ಉಂಟಾಗಿತ್ತು ಎಂದು ತಿಳಿದು ಬಂದಿದೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಇವರ ಅಕಾಲಿಕ ನಿಧನಕ್ಕೆ ಸಹ್ಯಾದ್ರಿ ಶಾಲಾ ಶಿಕ್ಷಣ ಸಂಸ್ಥೆಯ ಶಿಕ್ಷಕರು, ವಿದ್ಯಾರ್ಥಿಗಳು ಸಂತಾಪ ಸೂಚಿಸಿದ್ದಾರೆ. ಉತ್ತಮ ಸಮಾಜಕ್ಕೆ ಅತ್ಯುತ್ತಮ ಮಾಧ್ಯಮವಾಗಿ ಬಿಂಬಿಸಲು ತಾವೆಲ್ಲರೂ ನಿಮ್ಮ ಮಲೆನಾಡ "ಕರ್ನಾಟಕ ಸಿಟಿಝನ್ ನ್ಯೂಸ್" ಯೂಟ್ಯೂಬ್ ಚಾನಲನ್ನು ಸಬ್ಸ್ಕ್ರೈಬ್ ಮಾಡುವುದರ ಮೂಲಕ ಬೆಂಬಲಿಸಿ.

ತಮಿಳುನಾಡಿನಲ್ಲಿ ಭೀಕರ ಅಪಘಾತ ಐವರು ಸಜೀವ ದಹನ..!

Image
ತಮಿಳುನಾಡಿನಲ್ಲಿ ಭೀಕರ ಅಪಘಾತ ಐವರು ಸಜೀವ ದಹನ..!   ತಮಿಳುನಾಡು : ಬುಧವಾರ ಬೆಳಗ್ಗೆ ತಮಿಳು ನಾಡಿನ ಕರೂರ್ ಜಿಲ್ಲೆಯ ಕುಳಿತಲೈ ಹೆದ್ದಾರಿಯಲ್ಲಿ ಬಸ್ ಮತ್ತು ಕಾರುಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ.  ಈ ಘಟನೆ ಸಂದರ್ಭದಲ್ಲಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಐದು ಜನರು ಸಜೀವ ದಹನ ವಾಗಿದ್ದಾರೆ. ಬೆಂಕಿಯಲ್ಲಿ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ ಇದರಿಂದಾಗಿ ಕಿಲೋ ಮೀಟರ್ ಗಟ್ಟಲೆ ಸಂಚಾರ ದಟ್ಟಣೆ ( ಟ್ರಾಫಿಕ್ ಜಾಮ್ ) ಉಂಟಾಗಿತ್ತು. ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ಸಿಬ್ಬಂಧಿ ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಉತ್ತಮ ಸಮಾಜಕ್ಕೆ ಅತ್ಯುತ್ತಮ ಮಾಧ್ಯಮವಾಗಿ ಬಿಂಬಿಸಲು ತಾವೆಲ್ಲರೂ ನಿಮ್ಮ ಮಲೆನಾಡ "ಕರ್ನಾಟಕ ಸಿಟಿಝನ್ ನ್ಯೂಸ್" ಯೂಟ್ಯೂಬ್ ಚಾನಲನ್ನು ಸಬ್ಸ್ಕ್ರೈಬ್ ಮಾಡುವುದರ ಮೂಲಕ ಬೆಂಬಲಿಸಿ.

ನಿಗೂಢ ಕಾಯಿಲೆಗೆ 50 ಮಂದಿ ಬಲಿ, ಸೋಂಕು ಕಾಣಿಸಿಕೊಂಡ 48 ಗಂಟೆಯಲ್ಲಿ ಸಾವು..!

Image
ನಿಗೂಢ ಕಾಯಿಲೆಗೆ 50 ಮಂದಿ ಬಲಿ, ಸೋಂಕು ಕಾಣಿಸಿಕೊಂಡ 48 ಗಂಟೆಯಲ್ಲಿ ಸಾವು! ಆಫ್ರಿಕಾ ಖಂಡದ ಕಾಂಗೊದಲ್ಲಿ ಕಾಣಿಸಿಕೊಂಡ ನಿಗೂಢ ಕಾಯಿಲೆಗೆ 50 ಮಂದಿ ಅಸುನೀಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಸೋಂಕು ಕಾಣಿಸಿಕೊಂಡ 48 ಗಂಟೆಗಳಲ್ಲಿ ಜನರು ಸಾಯುತ್ತಿರುವುದು ಚಿಂತೆಗೀಡು ಮಾಡಿದ್ದು, ಘಟನಾ ಸ್ಥಳಕ್ಕೆ ವಿಶ್ವ ಆರೋಗ್ಯ ಸಂಸ್ಥೆ ತಜ್ಞರು ಹಾಗೂ ಸ್ಥಳೀಯ ವೈದ್ಯರು ಬೀಡು ಬಿಟ್ಟಿದ್ದು ರೋಗ ಲಕ್ಷಣಗಳ ಪತ್ತೆ ಕಾರ್ಯ ಆರಂಭಿಸಿದ್ದಾರೆ. ಜನವರಿ 21 ರಂದು ಮೊದಲ ಬಾರಿ ಈ ಸೋಂಕು ಕಾಣಿಸಿಕೊಂಡಿದ್ದು, ಇದುವರೆಗೆ 419 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 53 ಮಂದಿ ಅಸುನೀಗಿದ್ದಾರೆ. ಬೊಲೊಕೊ ನಗರದಲ್ಲಿ ಮೊದಲ ಬಾರಿ ಈ ಸೋಂಕು ಕಾಣಿಸಿಕೊಂಡಿದ್ದು, ಮೂವರು ಮಕ್ಕಳು ಬಾವುಲಿಯನ್ನು ಕೊಂದು ತಿಂದ ನಂತರ ಈ ಸೋಂಕು ಕಾಣಿಸಿಕೊಂಡಿದ್ದು, ಈ ಮಕ್ಕಳಲ್ಲಿ ಕೆಲವೇ ಗಂಟೆಗಳಲ್ಲಿ ತೀವ್ರ ಜ್ವರದಿಂದ ಬಳಲುತ್ತಿದ್ದು, ೪೮ ಗಂಟೆಗಳಲ್ಲಿ ಮೃತಪಟ್ಟಿದ್ದಾರೆ. ದಟ್ಟ ಕಾಡಿನಿಂದ ಆವರಿಸಿರುವ ಕಾಂಗೊನಂತಹ ಪ್ರದೇಶಗಳಲ್ಲಿ ಮಾಂಸಹಾರವನ್ನು ಹೆಚ್ಚಾಗಿ ಸೇವಿಸುತ್ತಾರೆ. ಅಲ್ಲದೇ ಹಲವು ರೀತಿಯ ಪ್ರಾಣಿ-ಪಕ್ಷಿಗಳನ್ನು ಸೇವಿಸುವುದರಿಂದ ಕಾಯಿಲೆಗಳು ವೇಗವಾಗಿ ಹರಡುತ್ತವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಫೆಬ್ರವರಿ ೯ರಿಂದ ಎರಡನೇ ಹಂತದಲ್ಲಿ ಸೋಂಕು ಹರಡಲು ಪ್ರಾರಂಭವಾಗಿದೆ. ಕಿನ್ಶಾಸಾ ನಗರದಲ್ಲಿ ಸೋಂಕಿತರು ಪತ್ತೆಯಾಗಿದ್ದು, ಇದುವರೆಗೆ 13 ಪ್ರಕರಣಗಳು ...

ತೀರ್ಥಹಳ್ಳಿ ; ಕೆಎಫ್‌ಡಿ ಸೋಂಕಿಗೆ ಮಹಿಳೆ ಬಲಿ !

Image
ತೀರ್ಥಹಳ್ಳಿ ; ಕೆಎಫ್‌ಡಿ ಸೋಂಕಿಗೆ ಮಹಿಳೆ ಬಲಿ ! ತೀರ್ಥಹಳ್ಳಿ ; ಕೆಎಫ್‌ಡಿ ಸೋಂಕಿನಿಂದ ಬಳಲುತ್ತಿದ್ದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ 55 ವರ್ಷದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು ತಡವಾಗಿ ಬೆಳಕಿಗೆ ಬಂದಿದೆ. ಇದು ಈ ವರ್ಷದ ಮೊದಲ ಬಲಿಯಾಗಿದೆ. ಕೊನೇರಿಪುರದ 55 ವರ್ಷದ ಮಹಿಳೆಗೆ ಜ.23ರಂದು ಕೆಎಫ್‌ಡಿ ಪಾಸಿಟಿವ್ ಬಂದಿತ್ತು. ನಂತರ ಅವರಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ನಂತರ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲಿಸಲಾಗಿತ್ತು. ಗುಣಮುಖರಾಗಿದ್ದ ಅವರು ಜ.29ರಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಮತ್ತೆ ರೋಗದ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆ ಫೆ.5ರಂದು ಮಣಿಪಾಲಕ್ಕೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಫೆ.14ರಂದು ಮೃತಪಟ್ಟಿದ್ದಾರೆ. ಮಹಿಳೆಯು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸಲಿಲ್ಲ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಈ ವರ್ಷ 48 ಮಂದಿಗೆ ಸೋಂಕು ; ಈ ವರ್ಷದಲ್ಲಿ ಫೆ.24ರವರೆಗೆ 4,568 ಮಂದಿಗೆ ರಕ್ತಮಾದರಿ ಪರೀಕ್ಷೆ ಮಾಡಲಾಗಿದ್ದು 48 ಮಂದಿಗೆ ಪಾಸಿಟಿವ್ ಬಂದಿದೆ. ಒಬ್ಬರು ಮೃತಪಟ್ಟಿದ್ದಾರೆ. ಶಿವಮೊಗ್ಗ 21, ಉತ್ತರಕನ್ನಡ 1, ಚಿಕ್ಕಮಗಳೂರು 26 ಮಂದಿಗೆ ಪಾಸಿಟಿವ್ ಬಂದಿದೆ. 13 ಸಕ್ರಿಯ ಪ್ರಕರಣಗಳಿವೆ. ಉತ್ತಮ ಸಮಾಜಕ್ಕೆ ಅತ್ಯುತ್ತಮ ಮಾಧ್ಯಮವಾಗಿ ಬಿಂಬಿಸಲು ತಾವೆಲ್ಲರೂ ನಿ...

ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಪಿಕ್ ಅಪ್ ವಾಹನ ಪೊಲೀಸ್ ವಶಕ್ಕೆ..!

Image
ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಪಿಕ್ ಅಪ್ ವಾಹನ ಪೊಲೀಸ್ ವಶಕ್ಕೆ..!   ಶೃಂಗೇರಿ  : (ಕರ್ನಾಟಕ ಸಿಟಿಝನ್ ನ್ಯೂಸ್ ವರದಿ)  ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಪಿಕ್ ಅಪ್ ವಾಹನವನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ನಡೆದಿದೆ. ನಿನ್ನೆ ರಾತ್ರಿ ಕಿರಕೋಡು ಸಮೀಪ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ವೇಳೆ ಶೃಂಗೇರಿ PSI ನೇತೃತ್ವದಲ್ಲಿ ದಾಳಿ ನಡೆಸಿ ಪಿಕ್‌ ಅಪ್‌ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಈ ಅಕ್ರಮ ಮರಳು ಸಾಗಾಟ ಮಾಡುವ ವಾಹನಗಳ ಮುಂಭಾಗ ಮಾತ್ರ ನಂಬರ್ ಪ್ಲೇಟ್ ಹೊಂದಿದ್ದು, ಹಿಂಭಾಗ ನಂಬರ್‌ ಪ್ಲೇಟ್‌ ಇಲ್ಲದೆ ಮರಳು ಸಾಗಾಟದ ಧಂದೆಗೆ ಇಳಿಯುತ್ತಿದ್ದಾರೆ. ಮೆಣಸೆ ಮೂಲದ ವ್ಯಕ್ತಿ ಒಬ್ಬನ KA-18 D 1900 ನೊಂದಣಿ ಸಂಖ್ಯೆಯ  ವಾಹನವಾಗಿರುತ್ತದೆ.ಅತ್ಯಂತ ವೇಗವಾಗಿ ವಾಹನವನ್ನು ಚಲಾಯಿಸುವುದರಿಂದ ಕೆಲವು ರಸ್ತೆಗಳಲ್ಲಿ ರಾತ್ರಿ ಸಮಯದ ವೇಳೆ ವಾಹನದಲ್ಲಿ ಚಲಿಸಲು ಭಯದ ವಾತಾವರಣ ಇದೆ. ಸದ್ಯ ಪ್ರಕರಣವನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಲಾಗಿದ್ದು, ಅವರ ಮುಂದಿನ ಕ್ರಮ ಏನೆಂಬುದು ತಿಳಿಯಬೇಕಿದೆ. ಉತ್ತಮ ಸಮಾಜಕ್ಕೆ ಅತ್ಯುತ್ತಮ ಮಾಧ್ಯಮವಾಗಿ ಬಿಂಬಿಸಲು ತಾವೆಲ್ಲರೂ ನಿಮ್ಮ ಮಲೆನಾಡ  "ಕರ್ನಾಟಕ ಸಿಟಿಝನ್ ನ್ಯೂಸ್" ಯೂಟ್ಯೂಬ್ ಚಾನಲನ್ನು  ಸಬ್ಸ್ಕ್ರೈಬ್ ಮಾಡುವುದರ ಮೂಲಕ ಬೆಂಬಲಿಸಿ.

ಸರ್ಕಾರಿ ಬಸ್ ಡ್ರೈವರ್ ಕಂಡಕ್ಟರ್ ಮೇಲೆ ಹಲ್ಲೆ..! ಕರ್ನಾಟಕ-ಮಹಾರಾಷ್ಟ್ರ ಬಸ್ ಸೇವೆ ಸ್ಥಗಿತ..!

Image
ಸರ್ಕಾರಿ ಬಸ್ ಡ್ರೈವರ್ ಕಂಡಕ್ಟರ್ ಮೇಲೆ ಹಲ್ಲೆ..!  ಕರ್ನಾಟಕ-ಮಹಾರಾಷ್ಟ್ರ ಬಸ್ ಸೇವೆ ಸ್ಥಗಿತ..! ಬೆಳಗಾವಿ: ( ಕರ್ನಾಟಕ ಸಿಟಿಝನ್ ನ್ಯೂಸ್ ವರದಿ ) ಬೆಳಗಾವಿಯಲ್ಲಿ ವಾಯುವ್ಯ ಸಾರಿಗೆ ಸಂಸ್ಥೆಯ ನಿರ್ವಾಹಕ ಹಾಗೂ ಚಾಲಕನ ಮೇಲೆ ಹಲ್ಲೆ ಪ್ರಕರಣ ಸಂಬಂಧವಾಗಿ ಎರಡು ರಾಜ್ಯಗಳ ನಡುವೆ ಬಸ್ ಸಂಚಾರದಲ್ಲಿ ವ್ಯತ್ಯಯವಾಗಿದೆ. ಶನಿವಾರ ಸಂಜೆ 7ರ ಬಳಿಕ ಗಡಿ ಭಾಗಗಳಿಗೆ ಮಾತ್ರ ಸೀಮಿತವಾಗಿದೆ. ಈ ನಡುವೆ ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ  90 ಬಸ್ಸುಗಳು ಸಂಚರಿಸುತ್ತಿದ್ದವು ಆದರೆ ಪೊಲೀಸರ ಸೂಚನೆಯ ಮೇರೆಗೆ ಬಸ್ ಸಂಚಾರವನ್ನು ಸ್ಥಗಿಸಲಾಗಿದೆ  ಎಂದು ಸೂಚಿಸಲಾಗಿದೆ.           ಉತ್ತಮ ಸಮಾಜಕ್ಕೆ ಅತ್ಯುತ್ತಮ ಮಾಧ್ಯಮವಾಗಿ ಬಿಂಬಿಸಲು ತಾವೆಲ್ಲರೂ ನಿಮ್ಮ ಮಲೆನಾಡ  "ಕರ್ನಾಟಕ ಸಿಟಿಝನ್ ನ್ಯೂಸ್" ಯೂಟ್ಯೂಬ್ ಚಾನಲನ್ನು  ಸಬ್ಸ್ಕ್ರೈಬ್ ಮಾಡುವುದರ ಮೂಲಕ ಬೆಂಬಲಿಸಿ.

ಬೆಂಗಳೂರಿನಲ್ಲಿ ಮಧ್ಯರಾತ್ರಿ ಕಾಂಗ್ರೆಸ್ ಮುಖಂಡನ ಬರ್ಬರ ಕೊಲೆ! ಲಾಂಗು, ಮಚ್ಚು ಹಿಡಿದು ಬೆಂಬಲಿಗರ ಹೈಡ್ರಾಮ!

Image
ಬೆಂಗಳೂರಿನಲ್ಲಿ ಮಧ್ಯರಾತ್ರಿ ಕಾಂಗ್ರೆಸ್ ಮುಖಂಡನ ಬರ್ಬರ ಕೊಲೆ! ಲಾಂಗು, ಮಚ್ಚು ಹಿಡಿದು ಬೆಂಬಲಿಗರ ಹೈಡ್ರಾಮ! ಬೆಂಗಳೂರು: (ಕರ್ನಾಟಕ ಸಿಟಿಝನ್ ನ್ಯೂಸ್ ವರಧಿ) ನಗರದಲ್ಲಿ ಮಧ್ಯರಾತ್ರಿ ಕಾಂಗ್ರೆಸ್ ಮುಖಂಡನ (Congress Leader) ಬರ್ಬರ ಹತ್ಯೆಯಾಗಿದ್ದು, ಈ ಘಟನೆ ತೀವ್ರ ಕಳವಳ ಸೃಷ್ಟಿಸಿದೆ. ಅಶೋಕನಗರದ ಗರುಡ ಮಾಲ್ ಬಳಿ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಲೈವ್ ಬ್ಯಾಂಡ್ ಕಾರ್ಯಕ್ರಮವೊಂದರಿಂದ ಸ್ನೇಹಿತನ ಜೊತೆ ಬೈಕ್‌ನಲ್ಲಿ (Bike) ಮನೆಗೆ ತೆರಳುತ್ತಿದ್ದಾಗ ಹೈದರ್ ಅಲಿ (Haider Ali) ಎಂಬ ಕಾಂಗ್ರೆಸ್ ಮುಖಂಡನನ್ನು ದುಷ್ಕರ್ಮಿಗಳು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ. ಹೈದರ್ ಜೊತೆಯಲ್ಲಿದ್ದ ಸ್ನೇಹಿತನಿಗೆ ಗಾಯಗಳಾಗಿದ್ದು, ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹೈದರ್ ಅವರನ್ನು ಬೌರಿಂಗ್ ಆಸ್ಪತ್ರೆಗೆ ಸ್ಥಳಾಂತರಿಸುವಷ್ಟರಲ್ಲಿ ಅವರು ಮೃತಪಟ್ಟಿದ್ದರು. ಬೆಂಬಲಿಗರ ಹೈಡ್ರಾಮ ಈ ಘಟನೆ ಬೌರಿಂಗ್ ಆಸ್ಪತ್ರೆ ಬಳಿ ತೀವ್ರ ಕೋಲಾಹಲಕ್ಕೆ ಕಾರಣವಾಯಿತು. ವಿಷಯ ತಿಳಿದು ಆಸ್ಪತ್ರೆಗೆ ಆಗಮಿಸಿದ ಹೈದರ್ ಅವರ ಬೆಂಬಲಿಗರು ಆಸ್ಪತ್ರೆ ಗೇಟ್‌ ತಳ್ಳಿ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ, ಲಾಂಗು, ಮಚ್ಚು ಹಿಡಿದು ಝಳಪಿಸಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಶಾಸಕ ಎನ್.ಎ.ಹ್ಯಾರಿಸ...

"ವಿವಾಹಿತ ಮಹಿಳೆ ನೇಣಿಗೆ ಶರಣು "

Image
"ವಿವಾಹಿತ ಮಹಿಳೆ ನೇಣಿಗೆ ಶರಣು " ತೀರ್ಥಹಳ್ಳಿ :ಯ ಬೆಟ್ಟಮಕ್ಕಿಯಲ್ಲಿ ನಿನ್ನೆ ಅಂದರೆ ಗುರುವಾರ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ವಿವಾಹಿತ ಮಹಿಳೆಯೊಬ್ಬರು ನೇಣಿಗೆ ಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ ಶ್ರೀನಿಧಿ (24 ) ಮೃತ ದುರ್ದೈವಿ, ಇವರು ಮೂಲತಃ ಕಾರ್ಕಳ ತಾಲ್ಲೂಕಿನ ಕುಕ್ಕುಂದೂರು ಗ್ರಾಮದ ಕುದುರುನ ಬೆಟ್ಟು ನಿವಾಸಿ ಯಾಗಿದ್ದು ಕಳೆದ ಒಂದು ವರ್ಷ ಹಿಂದೆ ಬೆಟ್ಟಮಕ್ಕಿಯ ಸುದೀಪ್ ಶೆಟ್ಟಿ ಅವರೊಂದಿಗೆ ವಿವಾಹಿತರಾಗಿದ್ದರು. ಶ್ರೀ ನಿಧಿ ಆತ್ಮಹತ್ಯೆ ಮಾಡಿಕೊಂಡ ಕೋಣೆಯಲ್ಲಿ ಡೆತ್ ನೋಟ್ ದೊರೆತಿದೆ, ಆತ್ಮಹತ್ಯೆಗೆ ಇನ್ನೂ ನಿಖರವಾದ ಕಾರಣ ದೊರೆತಿಲ್ಲ. ಈ ವಿಚಾರವಾಗಿ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉತ್ತಮ ಸಮಾಜಕ್ಕೆ ಅತ್ಯುತ್ತಮ ಮಾಧ್ಯಮವಾಗಿ ಬಿಂಬಿಸಲು ತಾವೆಲ್ಲರೂ ನಿಮ್ಮ ಮಲೆನಾಡ "ಕರ್ನಾಟಕ ಸಿಟಿಝನ್ ನ್ಯೂಸ್" ಯೂಟ್ಯೂಬ್ ಚಾನಲನ್ನು ಸಬ್ಸ್ಕ್ರೈಬ್ ಮಾಡುವುದರ ಮೂಲಕ ಬೆಂಬಲಿಸಿ.

"ಉರುಳಿಗೆ ಸಿಲುಕಿದ್ದ ಚಿರತೆ ನರಳಿ ನರಳಿ ಸಾವು"

Image
"ಉರುಳಿಗೆ ಸಿಲುಕಿದ್ದ ಚಿರತೆ ನರಳಿ ನರಳಿ ಸಾವು"  ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಾಳೂರು ಸಮೀಪದ ಕಾಫಿ ತೋಟದಲ್ಲಿ ಚಿರತೆಯೊಂದು ಬೇಟೆಗಾರರು ಹಾಕಿದ ಉರುಳಿಗೆ ಸಿಲುಕಿ ನರಳಾಡಿ ನರಳಾಡಿ ಮೃತಪಟ್ಟಿದೆ. ಕಾಡುಹಂದಿ ಬೇಟೆಗೆ ಬೇಟೆಗಾರರು ಹಾಕಿದ್ದ ಉರುಳಿಗೆ ನಿನ್ನೆ ರಾತ್ರಿಯೇ ಚಿರತೆ ಸಿಲುಕಿದೆ. ಇಂದು ಬೆಳಿಗ್ಗೆ ಗಮನಿಸಿದ ಸ್ಥಳೀಯರು, ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದರು.  ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಚಿರತೆ ರಕ್ಷಣೆಗೆ ಪ್ರಯತ್ನಿಸಿದರು. ಶಿವಮೊಗ್ಗದಿಂದ ಅರಿವಳಿಕೆ ತಜ್ಞರನ್ನು ಕರೆಸಿ ರಕ್ಷಣೆ ಮಾಡಲು ಮುಂದಾದರು. ಅಷ್ಟರಲ್ಲಿ ಚಿರತೆ ಉಸಿರಾಟ ನಿಲ್ಲಿಸಿದೆ ಉರುಳು ಬಿಡಿಸಿಕೊಳ್ಳುವ ಪ್ರಯತ್ನದಲ್ಲಿ ಸೊಂಟಕ್ಕೆ ಇಳಿದಿದ್ದ ಉರುಳು ಮತ್ತಷ್ಟು ಬಿಗಿಯಾಗಿ ಚಿರತೆ ಮೃತಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾಫಿ ತೋಟದ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಿ ಮರಣೋತ್ತರ ಪರೀಕ್ಷೆ ಬಳಿಕ ತನಿಖೆ ನಡೆಯಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ... ಉತ್ತಮ ಸಮಾಜಕ್ಕೆ ಅತ್ಯುತ್ತಮ ಮಾಧ್ಯಮವಾಗಿ ಬಿಂಬಿಸಲು ತಾವೆಲ್ಲರೂ ನಿಮ್ಮ ಮಲೆನಾಡ "ಕರ್ನಾಟಕ ಸಿಟಿಝನ್ ನ್ಯೂಸ್" ಯೂಟ್ಯೂಬ್ ಚಾನಲನ್ನು ಸಬ್ಸ್ಕ್ರೈಬ್ ಮಾಡುವುದರ ಮೂಲಕ ಬೆಂಬಲಿಸಿ.

ಅನಾರೋಗ್ಯದಿಂದ ಬಳಲುತ್ತಿದ್ದ ಆಶಾ ಕಾರ್ಯಕರ್ತೆ ಸಾವು..!

Image
ಅನಾರೋಗ್ಯದಿಂದ ಬಳಲುತ್ತಿದ್ದ ಆಶಾ ಕಾರ್ಯಕರ್ತೆ ಸಾವು..!   ಶೃಂಗೇರಿ : ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಹಾಲಂದೂರು ಗ್ರಾಮ ವಾಸಿ ಸುಮ(31) ಇವರು ಆಶಾ ಕಾರ್ಯಕರ್ತೆಯಾಗಿ ಕೆಲಸ ಮಾಡಿಕೊಂಡಿದ್ದು ಟಿಬಿ ಕಾಯಿಲೆಯಿಂದ ಬಳಲುತ್ತಿದ್ದ ಇವರು ಫಲಕಾರಿಯಾಗಿದೆ ನೆನ್ನೆ ಗುರುವಾರ ಸಾವನ್ನಪ್ಪಿದ್ದಾರೆ. ಮೃತರಿಗೆ ಎರಡು ಸಣ್ಣ ವಯಸ್ಸಿನ ಮಕ್ಕಳಿದ್ದಾರೆ ಎಂದು ತಿಳಿದು ಬಂದಿದೆ. ಉತ್ತಮ ಸಮಾಜಕ್ಕೆ ಅತ್ಯುತ್ತಮ ಮಾಧ್ಯಮವಾಗಿ ಬಿಂಬಿಸಲು ತಾವೆಲ್ಲರೂ ನಿಮ್ಮ ಮಲೆನಾಡ "ಕರ್ನಾಟಕ ಸಿಟಿಝನ್ ನ್ಯೂಸ್" ಯೂಟ್ಯೂಬ್ ಚಾನಲನ್ನು ಸಬ್ಸ್ಕ್ರೈಬ್ ಮಾಡುವುದರ ಮೂಲಕ ಬೆಂಬಲಿಸಿ.

ಬೆಂಗಳೂರಿನ ಯುವಕ-ಯುವತಿ ಚಿಕ್ಕಮಗಳೂರಿನಲ್ಲಿ ದುರ್ಮರಣ: ಸಾವಿನ ಸುತ್ತ ಅನುಮಾನದ ಹುತ್ತ!ಪ್ರೇಯಸಿಯನ್ನು ಕೊಂದು ಯುವಕ ಆತ್ಮಹತ್ಯೆ !

Image
ಬೆಂಗಳೂರಿನ ಯುವಕ-ಯುವತಿ ಚಿಕ್ಕಮಗಳೂರಿನಲ್ಲಿ ದುರ್ಮರಣ: ಸಾವಿನ ಸುತ್ತ ಅನುಮಾನದ ಹುತ್ತ!ಪ್ರೇಯಸಿಯನ್ನು ಕೊಂದು ಯುವಕ ಆತ್ಮಹತ್ಯೆ ! ಚಿಕ್ಕಮಗಳೂರು ; ಕಾಫಿನಾಡಿನಲ್ಲಿ ಪ್ರೇಮಿಗಳ ದುರಂತ ಅಂತ್ಯವಾಗಿದ್ದು, ಪ್ರೇಯಸಿಯನ್ನು ಕೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.  ತಾಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ಬೆಂಗಳೂರು ಮೂಲದ ಯುವಕ ಹಾಗೂ ಯುವತಿಯ ಶವಗಳು ಪತ್ತೆಯಾಗಿರುವ ಘಟನೆ ಜರುಗಿದೆ. ಯುವಕನ ಮೃತದೇಹ ಕಾರು ನಿಂತ ಜಾಗದ ಪಕ್ಕದ ಮರದಲ್ಲಿ ಪತ್ತೆಯಾಗಿವೆ.ಇಬ್ಬರ ವಯಸ್ಸು ಅಂದಾಜು 25-30ರ ಒಳಗಿದ್ದು, ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ. ಯುವತಿಯ ಕುತ್ತಿಗೆಯಲ್ಲಿ ಕತ್ತು ಹಿಸುಕಿರುವ ಗುರುತು ಇದೆ. ಯುವಕ ಕಾರು ನಿಂತ ಜಾಗದ ಪಕ್ಕದ ಮರಕ್ಕೆ ವೇಲ್‌ನಿಂದ ನೇಣು ಹಾಕಿಕೊಂಡಿದ್ದಾನೆ. ಯುವಕ ನೇಣು ಹಾಕಿಕೊಂಡಿರುವ ಜಾಗ ಕೂಡ ಒಂದು ರೀತಿ ಅನುಮಾನಾಸ್ಪದವಾಗಿದೆ. ವೇಲ್ ಕುಣಿಕೆಗೆ ಕೊರಳೊಡ್ಡಿ ಜಿಗಿದರೆ ವೇಲ್ ತುಂಡಾಗುವ ಸಾಧ್ಯತೆಯೂ ಇದೆ. ಆದರೆ ಯುವಕನ ಶವ ನೇತಾಡುತ್ತಿತ್ತು. ಕಾರು ಕೂಡ ರಸ್ತೆಯಲ್ಲಿ ನಿಂತಿಲ್ಲ. ರಸ್ತೆ ಬದಿಯ ಪಕ್ಕದ ಚರಂಡಿಗೆ ಎರಡು ಚಕ್ರಗಳು ಇಳಿದಿದ್ದು ಕಾರು ಚರಂಡಿಗೆ ಏಕೆ? ಹೇಗೆ ಇಳಿಯಿತು ಎಂಬ ಪ್ರಶ್ನೆ ಮೂಡಿದೆ. ಕಾರು ಮೂಲತಃ ಬೆಂಗಳೂರು ನೋಂದಣಿಯದ್ದಾಗಿದ್ದು, ಎಲ್ಲೋ ಬೋರ್ಡ್ ಗಾಡಿಯಾಗಿದೆ. ಮೇಲ್ನೋಟಕ್ಕೆ ಮೃತ ಯುವಕ ಡ್ರೈವರ್ ಇರಬಹುದು ಎಂದು ಅಂದಾಜಿಸಲಾಗಿದ್ದು, ಮೂಲತ...

" ಭೀಕರ ರಸ್ತೆ ಅಪಘಾತ : ಮಹಿಳೆ ಸ್ಥಳದಲ್ಲೇ ಸಾವು ..!"

Image
" ಭೀಕರ ರಸ್ತೆ ಅಪಘಾತ  : ಮಹಿಳೆ  ಸ್ಥಳದಲ್ಲೇ ಸಾವು ..!" ತೀರ್ಥಹಳ್ಳಿ : ( ಕರ್ನಾಟಕ ಸಿಟಿಝನ್ ನ್ಯೂಸ್ ವರದಿ ) ಕಾರಿನ   ಓವರ್ ಟೇಕ್ ರಭಸಕ್ಕೆ ಮಹಿಳೆಯೋರ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಂಕದ ಹೊಳೆಯಲ್ಲಿ ಫೆ. 19ರಂದು (ಇಂದು) ಸಂಭವಿಸಿದೆ, ಮೃತಪಟ್ಟ ಮಹಿಳೆ ಮಮತಾ (40) ದುರ್ದೈವಿ. ತೀರ್ಥಹಳ್ಳಿಯ "ಸ್ಟಾರ್ ಟೈಲರ್" ಮಾಲೀಕರಾದ ಗಂಗಾಧರ್ ಆಚಾರ್ ಇವರ ಧರ್ಮಪತ್ನಿ  ಮಮತಾ ಆವರು ಮಧ್ಯಾಹ್ನ ಸ್ಕೂಟಿಯಲ್ಲಿ ಬರುತ್ತಿದ್ದ ವೇಳೆ ಕಾರೊಂದು ಓವರ್ ಟೇಕ್ ಮಾಡಿದ, ಸಂದರ್ಭ ಎದುರಿನಿಂದ ಬರುತ್ತಿದ್ದ ಮಹಿಳೆಗೆ ಸ್ಕೂಟರ್ ಢಿಕ್ಕಿ ಹೊಡೆದಿರುವ ದುರ್ಘಟನೆ ನಡೆದಿದೆ. ಕಾರಿನ ನಡುವೆ ಅಪಘಾತ ನಡೆದು ಯುವತಿಯ ಮೈ ಮೇಲೆ ಕಾರಿನ ಟೈಯರ್ ಹರಿದ ಪರಿಣಾಮವಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೃತ ಯವತಿ ಹಾಗೂ ಘಟನೆಯ ಬಗ್ಗೆ ಪೋಲಿಸ್ ಮೂಲಗಳಿಂದ ಇನ್ನಷ್ಟು ತಿಳಿಯಬೇಕಾಗಿದೆ,  ಈ ಘಟನೆ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.     ಉತ್ತಮ ಸಮಾಜಕ್ಕೆ ಅತ್ಯುತ್ತಮ ಮಾಧ್ಯಮವಾಗಿ ಬಿಂಬಿಸಲು ತಾವೆಲ್ಲರೂ ನಿಮ್ಮ ಮಲೆನಾಡ "ಕರ್ನಾಟಕ ಸಿಟಿಝನ್ ನ್ಯೂಸ್" ಯೂಟ್ಯೂಬ್ ಚಾನಲನ್ನು ಸಬ್ಸ್ಕ್ರೈಬ್ ಮಾಡುವುದರ ಮೂಲಕ ಬೆಂಬಲಿಸಿ.

ಜಲಪಾತದಲ್ಲಿ ಈಜಲು ಹೋಗಿದ್ದ ಯುವಕನ ತಲೆಗೆ ಬಂಡೆ ತಗುಲಿ ಸಾವು !

Image
ಜಲಪಾತದಲ್ಲಿ ಈಜಲು ಹೋಗಿದ್ದ ಯುವಕನ ತಲೆಗೆ ಬಂಡೆ ತಗುಲಿ ಸಾವು ! ಚಿಕ್ಕಮಗಳೂರು ;( ಕರ್ನಾಟಕ ಸಿಟಿಝನ್ ನ್ಯೂಸ್ ವರದಿ ) ಕಾಮೇನಹಳ್ಳಿ ಜಲಪಾತದಲ್ಲಿ ಈಜಲು ಹೋಗಿದ್ದ ಯುವಕನೋರ್ವನ ತಲೆ ಬಂಡೆಗೆ ತಗುಲಿ ಮೃತಪಟ್ಟ ಘಟನೆ ನಡೆದಿದೆ. ಚೇತನ್ (18) ಮೃತ ಯುವಕ ಎಂದು ಗುರುತಿಸಲಾಗಿದೆ. ಕಾಮೇನಹಳ್ಳಿ ಜಲಪಾತವು ಚಿಕ್ಕಮಗಳೂರಿನಿಂದ ಸುಮಾರು 30 ಕಿ.ಮೀ ದೂರದಲ್ಲಿದ್ದು, ಮಲ್ಲೇನಹಳ್ಳಿ ಮಾರ್ಗವಾಗಿ ಪ್ರವೇಶಿಸಬಹುದು. ಈ ಜಲಪಾತವು ಸುಮಾರು 70-90 ಅಡಿ ಎತ್ತರದಿಂದ ಧುಮ್ಮಿಕ್ಕಿ ಹರಿಯುತ್ತಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತದೆ. ಆದರೆ, ಸುರಕ್ಷತಾ ಕ್ರಮಗಳನ್ನು ಪಾಲಿಸದೆ ಈಜಲು ಹೋಗುವುದು ಅಪಾಯಕಾರಿಯಾಗಿದೆ. ಈ ಹಿಂದೆ, 2024ರ ನವೆಂಬರ್‌ನಲ್ಲಿ, ಬೆಂಗಳೂರಿನ ಟೆಕ್ಕಿ ಅಮಿತ್ ಕುಮಾರ್ ಹೆಬ್ಬೆ ಜಲಪಾತದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಕಾಮೇನಹಳ್ಳಿ ಜಲಪಾತವು ಪ್ರವಾಸಿಗರ ಹಾಟ್‍ಸ್ಪಾಟ್ ಆಗಿದ್ದು, ಸರಿಯಾದ ದಾರಿ ಇಲ್ಲದಿದ್ದರೂ, ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ. ಚಿಕ್ಕಮಗಳೂರಿನಿಂದ ಮಲ್ಲೇನಹಳ್ಳಿ ಮಾರ್ಗವಾಗಿ 30 ಕಿ.ಮೀ. ಸಾಗಿ, ಕಾಮೇನಹಳ್ಳಿಗೆ ಎಂಟ್ರಿಯಾದರೆ, ಸುಮಾರು ಒಂದೂವರೆ ಕಿ.ಮೀ. ನಡೆದು ಜಲಪಾತವನ್ನು ತಲುಪಬಹುದು. ಜಲಪಾತಗಳಲ್ಲಿ ಈಜಲು ಹೋಗುವಾಗ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅತ್ಯಂತ ಮುಖ್ಯವಾಗಿದೆ. ಅಧಿಕಾರಿಗಳು ನೀಡಿರುವ ಎಚ್ಚರಿಕೆಗಳನ್ನು ಗಮನಿಸಿ, ಅಪಾಯಗಳನ್ನು ತಪ್ಪಿಸಲು ಪ್...

ತೀರ್ಥಹಳ್ಳಿ : ತಾಲೂಕು ಕಛೇರಿ ಎದುರು ವ್ಯಕ್ತಿಗೆ ಹೃದಯಾಘಾತ!

Image
ತೀರ್ಥಹಳ್ಳಿ : ತಾಲೂಕು ಕಛೇರಿ ಎದುರು ವ್ಯಕ್ತಿಗೆ ಹೃದಯಾಘಾತ!   ತೀರ್ಥಹಳ್ಳಿ :ಕೆಲಸದ ಸಲುವಾಗಿ ತಾಲೂಕು ಕಚೇರಿಗೆ ಬಂದ ವ್ಯಕ್ತಿಯೊಬ್ಬರಿಗೆ ಹೃದಯಾಘಾತವಾಗಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ತೀರ್ಥಹಳ್ಳಿಯ ಹಾರೋಗೋಳಿಗೆ ಗ್ರಾಮ ಪಂಚಾಯಿತಿಯ ಹರಳಿ ಮಠ ಸಮೀಪದ ಚಿಕ್ಕೊಳ್ಳಿಯ ವಿಜಯ್ (43) ಎಂದು ತಿಳಿದು ಬಂದಿದೆ.ಮೃತರು ತಂದೆ ತಾಯಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.           ಉತ್ತಮ ಸಮಾಜಕ್ಕೆ ಅತ್ಯುತ್ತಮ ಮಾಧ್ಯಮವಾಗಿ ಬಿಂಬಿಸಲು ತಾವೆಲ್ಲರೂ ನಿಮ್ಮ ಮಲೆನಾಡ "ಕರ್ನಾಟಕ ಸಿಟಿಝನ್ ನ್ಯೂಸ್" ಯೂಟ್ಯೂಬ್ ಚಾನಲನ್ನು ಸಬ್ಸ್ಕ್ರೈಬ್ ಮಾಡುವುದರ ಮೂಲಕ ಬೆಂಬಲಿಸಿ.

ಉಡುಪಿ: ಎರಡು ಬೈಕುಗಳ ಮಧ್ಯೆ ಭೀಕರ ಅಪಘಾತ: ಓರ್ವ ಸವಾರ ಸ್ಥಳದಲ್ಲಿಯೇ ಮೃತ್ಯು

Image
ಉಡುಪಿ: ಎರಡು ಬೈಕುಗಳ ಮಧ್ಯೆ ಭೀಕರ ಅಪಘಾತ: ಓರ್ವ ಸವಾರ ಸ್ಥಳದಲ್ಲಿಯೇ ಮೃತ್ಯು ಉಡುಪಿ : ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸರವಾರರೊಬ್ಬರು ಸ್ಥಳದಲ್ಲಿ ಮೃತಪಟ್ಟ ಘಟನೆ ಸೋಮವಾರ ತಡರಾತ್ರಿ ಅಜ್ಜರಕಾಡು ಅಗ್ನಿಶಾಮಕ ದಳ ಠಾಣೆಯ ಸಮೀಪ ನಡೆದಿದೆ. ಮೃತರನ್ನು ಸ್ಯಾಮುಯೆಲ್‌ ಸದಾನಂದ ಕರ್ಕಡ(59) ಎಂದು ಗುರುತಿಸಲಾಗಿದೆ. ಅತಿ ವೇಗದಿಂದ ಬಂದ ಎರಡು ಬೈಕುಗಳು ಮುಖಾಮುಖಿ ಡಿಕ್ಕಿಯಾಗಿದ್ದು ಇದರ ಪರಿಣಾಮ ಸದಾನಂದ ರಸ್ತೆಗೆ ಬಿದ್ದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡು ಅವರು ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದು ಬಂದಿದೆ. ಅಪಘಾತದಿಂದ ಎರಡು ಬೈಕ್ ಗಳು ಕೂಡ ಸಂಪೂರ್ಣ ಜಖಂಗೊಂಡಿವೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉತ್ತಮ ಸಮಾಜಕ್ಕೆ ಅತ್ಯುತ್ತಮ ಮಾಧ್ಯಮವಾಗಿ ಬಿಂಬಿಸಲು ತಾವೆಲ್ಲರೂ ನಿಮ್ಮ ಮಲೆನಾಡ "ಕರ್ನಾಟಕ ಸಿಟಿಝನ್ ನ್ಯೂಸ್" ಯೂಟ್ಯೂಬ್ ಚಾನಲನ್ನು ಸಬ್ಸ್ಕ್ರೈಬ್ ಮಾಡುವುದರ ಮೂಲಕ ಬೆಂಬಲಿಸಿ.

ತೆಲಂಗಾಣದ ಬಳಿಕ ರಮಝಾನ್ ತಿಂಗಳಲ್ಲಿ ಮುಸ್ಲಿಂ ಉದ್ಯೋಗಿಗಳು ಕಚೇರಿಗಳಿಂದ ಬೇಗನೇ ತೆರಳಲು ಅನುಮತಿ ನೀಡಿದ ಆಂಧ್ರಪ್ರದೇಶ ಸರಕಾರ

Image
ತೆಲಂಗಾಣದ ಬಳಿಕ ರಮಝಾನ್ ತಿಂಗಳಲ್ಲಿ ಮುಸ್ಲಿಂ ಉದ್ಯೋಗಿಗಳು ಕಚೇರಿಗಳಿಂದ ಬೇಗನೇ ತೆರಳಲು ಅನುಮತಿ ನೀಡಿದ ಆಂಧ್ರಪ್ರದೇಶ ಸರಕಾರ ಹೊಸದಿಲ್ಲಿ : ತೆಲಂಗಾಣದ ಬಳಿಕ ಚಂದ್ರಬಾಬು ನಾಯ್ಡು ನೇತೃತ್ವದ ಆಂಧ್ರಪ್ರದೇಶ ಸರಕಾರ ರಮಝಾನ್ ಉಪವಾಸದ ಸಮಯದಲ್ಲಿ ಮುಸ್ಲಿಂ ಉದ್ಯೋಗಿಗಳು ಕಚೇರಿಗಳಿಂದ ಬೇಗನೆ ತೆರಳಲು ಅನುಮತಿ ನೀಡಿದೆ. ಎಲ್ಲಾ ಮುಸ್ಲಿಂ ಸರಕಾರಿ ನೌಕರರು ಅಥವಾ ಶಿಕ್ಷಕರು ಅಥವಾ ಗುತ್ತಿಗೆ – ಹೊರಗುತ್ತಿಗೆ ನೌಕರರು, ನಿಗಮ-ಮಂಡಳಿಗಳಲ್ಲಿ ಮತ್ತು ಸಾರ್ವಜನಿಕ ವಲಯದಲ್ಲಿ ಕೆಲಸ ಮಾಡುತ್ತಿರ ಮುಸ್ಲಿಂ ನೌಕರರು ಪವಿತ್ರ ರಮಝಾನ್ ತಿಂಗಳಲ್ಲಿ ಅಂದರೆ ಮಾರ್ಚ್ 2 ರಿಂದ 30ರವರೆಗೆ ಸಂಜೆ 4 ಗಂಟೆಗೆ ತಮ್ಮ ಕಚೇರಿಗಳು ಅಥವಾ ಶಾಲೆಗಳಿಂದ ಹೊರಹೋಗಲು ಸರಕಾರ ಅನುಮತಿ ನೀಡಿದೆ ಎಂದು ಆಂಧ್ರ ಸರ್ಕಾರದ ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ.     ಉತ್ತಮ ಸಮಾಜಕ್ಕೆ ಅತ್ಯುತ್ತಮ ಮಾಧ್ಯಮವಾಗಿ ಬಿಂಬಿಸಲು ತಾವೆಲ್ಲರೂ ನಿಮ್ಮ ಮಲೆನಾಡ "ಕರ್ನಾಟಕ ಸಿಟಿಝನ್ ನ್ಯೂಸ್" ಯೂಟ್ಯೂಬ್ ಚಾನಲನ್ನು ಸಬ್ಸ್ಕ್ರೈಬ್ ಮಾಡುವುದರ ಮೂಲಕ ಬೆಂಬಲಿಸಿ.

ಭದ್ರಾ ನದಿಯಲ್ಲಿ ಮೀನು ಹಿಡಿಯಲು ಹೋಗಿ ಯುವಕ ಸಾವು..!

Image
ಭದ್ರಾ ನದಿಯಲ್ಲಿ ಮೀನು ಹಿಡಿಯಲು ಹೋಗಿ ಯುವಕ ಸಾವು..! ಎನ್ ಆರ್ ಪುರ: ತಾಲ್ಲೂಕಿನ ಗಡಿಗೇಶ್ವರ ಬಳಿ ಭದ್ರಾ ನದಿಯಲ್ಲಿ ಜಲಾಲ್(19)ಎಂಬ ಯುವಕ ಮೀನು ಹಿಡಿಯಲು ಹೋಗಿ ಭಾನುವಾರ ಸಂಜೆ ಮೃತಪಟ್ಟಿದ್ದಾನೆ.  ಬಾಳೆಹೊನ್ನೂರಿನ ಭದ್ರಾ ನದಿಗೆ ನಿನ್ನೆ ಸಂಜೆ ಮೂವರು ಸ್ನೇಹಿತರು ಈಜಲು ತೆರಳಿದ್ದರು. ಈ ವೇಳೆ ಜಲಾಲ್ ನದಿಯ ಸುಳಿಗೆ ಸಿಲುಕಿದ್ದು ಸ್ನೇಹಿತರು ಆತನನ್ನು ರಕ್ಷಿಸಲು ಹರಸಾಹಸ ಪಟ್ಟರೂ ಸಾಧ್ಯವಾಗಲಿಲ್ಲ. ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಶವಕ್ಕಾಗಿ ತೀವ್ರ ಶೋಧ ನಡೆಸಿದ್ದರೂ ಸಂಜೆವರೆಗೂ ಶವ ಪತ್ತೆಯಾಗದೆ ಹುಡುಕಾಟವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಯಿತು. ಇಂದು ಮುಳುಗು ತಜ್ಞರು ಮತ್ತು ಅಗ್ನಿಶಾಮಕ ದಳದಿಂದ ಶೋಧ ಕಾರ್ಯಾಚರಣೆ ಪುನರಾರಂಭಗೊಂಡಿದೆ. ಈ ಘಟನೆಯು ಭದ್ರಾ ನದಿಗೆ ಮೀನು ಹಿಡಿಯಲು ಹೋಗಿದಾಗ ಈ ಘಟನೆ ಸಂಭವಿಸಿದೆ. ಇನ್ನೂ ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ ಈ ಘಟನೆ ಸಂಬಂಧ ಎನ್ಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉತ್ತಮ ಸಮಾಜಕ್ಕೆ ಅತ್ಯುತ್ತಮ ಮಾಧ್ಯಮವಾಗಿ ಬಿಂಬಿಸಲು ತಾವೆಲ್ಲರೂ ನಿಮ್ಮ ಮಲೆನಾಡ "ಕರ್ನಾಟಕ ಸಿಟಿಝನ್ ನ್ಯೂಸ್" ಯೂಟ್ಯೂಬ್ ಚಾನಲನ್ನು ಸಬ್ಸ್ಕ್ರೈಬ್ ಮಾಡುವುದರ ಮೂಲಕ ಬೆಂಬಲಿಸಿ.

ರಾಜ್ಯಸರ್ಕಾರದಿಂದ ಶಾಲಾ – ಕಾಲೇಜು ಬಳಿಯಲ್ಲಿರುವ ಮದ್ಯದಂಗಡಿಗಳಿಗೆ ಬ್ರೇಕ್!

Image
ರಾಜ್ಯಸರ್ಕಾರದಿಂದ ಶಾಲಾ – ಕಾಲೇಜು ಬಳಿಯಲ್ಲಿರುವ ಮದ್ಯದಂಗಡಿಗಳಿಗೆ ಬ್ರೇಕ್!    ಕರ್ನಾಟಕ: ರಾಜ್ಯ ಸರ್ಕಾರದಿಂದ ಶಾಲಾ-ಕಾಲೇಜುಗಳ ಬಳಿಯಲ್ಲಿ ತೆರೆದಿರುವಂತ ಮಧ್ಯದಂಗಡಿಗಳಿಗೆ ಬ್ರೇಕ್ ಹಾಕಲಾಗಿದೆ. ಉಲ್ಲಂಘನೆ ಮಾಡಿದ್ದಲ್ಲಿ ಶೈಕ್ಷಣಿಕ ಸಂಸ್ಥೆಗಳಿಂದ ಅಬಕಾರಿ ಇಲಾಖೆಗೆ ದೂರು ನೀಡಲು ಸೂಚಿಸಿದೆ.ಆದೇಶ ಪತ್ರದಲ್ಲೇನಿದೆ :- ಶಾಲಾ/ಕಾಲೇಜುಗಳ ಸಮೀಪ ಮದ್ಯದಂಗಡಿಗಳಿದ್ದು ಇದರಿಂದಾಗಿ ವಿಧ್ಯಾಭ್ಯಾಸಕ್ಕೆ ಹಾಗೂ ನಿರ್ವಹಣೆಗೆ, ತೊಂದರೆಯಾಗುತ್ತಿದ್ದಲ್ಲಿ ಸಂಬಂದಪಟ್ಟ ಶೈಕ್ಷಣಿಕ ಸಂಸ್ಥೆಗಳವರು ಅಬಕಾರಿ ಇಲಾಖೆಗೆ ದೂರು ಸಲ್ಲಿಸಲು ತಿಳಿಸುತ್ತಾ ಈ ಕುರಿತು ಅಬಕಾರಿ ಇಲಾಖೆಯಿಂದ ಕಮಕೈಗೊಳ್ಳಲಾಗುವುದೆಂದು ತಿಳಿಸಿರುತ್ತಾರೆ ಎಂದು ಹೇಳಿದ್ದಾರೆ. ವ್ಯಸನ ಮುಕ್ತಗೊಳಿಸುವ ಬಗ್ಗೆ ಸಾರ್ವಜನಿಕರು, ಶಾಲಾ ಮಕ್ಕಳು ಹಾಗೂ ಪಾಲಕರಲ್ಲಿ ಜಾಗೃತಿ ಮೂಡಿಸಲು ಕ್ರಿಯಾ ಯೋಜನೆಯನ್ನು ರೂಪಿಸಲು ಶಿಕ್ಷಣ ಇಲಾಖೆಯು ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿ ಕಾರ, ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ ಮತ್ತು ಅಬಕಾರಿ ಇಲಾಖೆ ಆಯುಕ್ತರೊಂದಿಗೆ ಸಮನ್ವಯ ಸಾಧಿಸಬೇಕು ಎಂದು ತಿಳಿಸಲಾಗಿದೆ ಎಂದಿದ್ದಾರೆ. ಅದರಂತೆ ತಮ್ಮ ಜಿಲ್ಲಾ ವಾಪ್ತಿಯಲ್ಲಿ ಶಾಲಾ/ಕಾಲೇಜುಗಳ ಸಮೀಪ ಮದ್ಯದಂಗಡಿಗಳಿದ್ದು ಇದರಿಂದಾಗಿ ವಿಧ್ಯಾಭ್ಯಾಸಕ್ಕೆ ಹಾಗೂ ನಿರ್ವಹಣೆಗೆ, ತೊಂದರೆಯಾಗುತ್ತಿದ್ದಲ್ಲಿ ಸಂಬಂದಪಟ್ಟ ಶೈಕ್ಷಣಿಕ ಸಂಸ್ಥೆಗಳವರು ಅಬಕಾರಿ ಇಲಾಖೆಗೆ ದೂರು ಸಲ್ಲಿಸಿ ಸೂಕ್ತ ಕ್...

"ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ: ಬೈಕ್‌ ಸವಾರನಿಗೆ ಗಂಭೀರ ಗಾಯ"

Image
 "ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ: ಬೈಕ್‌ ಸವಾರನಿಗೆ ಗಂಭೀರ ಗಾಯ" ಮೂಡಿಗೆರೆ :ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್‌ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪಲ್ಗುಣಿ ಬಳಿ ನಡೆದಿದೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ಹಾಗೂ ಮೂಡಿಗೆರೆ ಕಡೆ ಹೋಗುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಬೈಕ್‌ ಸವಾರನಿಗೆ ಗಂಭೀರ ಗಾಯವಾಗಿದೆ. ಬೈಕ್ ಸವಾರ ಸುಜೀತ್ ಎಂಬುವವರು ಮೆಗಲ್ ಪೇಟೆಯವರಾಗಿದ್ದು, ತಲೆ ಹಾಗೂ ಕೈ ಕಾಲಿಗೆ ತೀವ್ರ ಪೆಟ್ಟಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.