"ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ: ಬೈಕ್‌ ಸವಾರನಿಗೆ ಗಂಭೀರ ಗಾಯ"

 "ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ: ಬೈಕ್‌ ಸವಾರನಿಗೆ ಗಂಭೀರ ಗಾಯ"
ಮೂಡಿಗೆರೆ :ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್‌ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪಲ್ಗುಣಿ ಬಳಿ ನಡೆದಿದೆ.

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ಹಾಗೂ ಮೂಡಿಗೆರೆ ಕಡೆ ಹೋಗುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಬೈಕ್‌ ಸವಾರನಿಗೆ ಗಂಭೀರ ಗಾಯವಾಗಿದೆ.

ಬೈಕ್ ಸವಾರ ಸುಜೀತ್ ಎಂಬುವವರು ಮೆಗಲ್ ಪೇಟೆಯವರಾಗಿದ್ದು, ತಲೆ ಹಾಗೂ ಕೈ ಕಾಲಿಗೆ ತೀವ್ರ ಪೆಟ್ಟಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.

ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Popular posts from this blog

ಶೃಂಗೇರಿ ಮೂಲದ ಮುಸ್ಲಿಂ ಕುಟುಂಬ ಚಲಿಸುತ್ತಿದ್ದ ಕಾರು ಅಪಘಾತ : 3 ಮಕ್ಕಳು ಸೇರಿ ಓರ್ವ ವೃದ್ದೆ ಸಾವು..!

"ದ್ವಿತೀಯ ಪಿಯುಸಿ ವಿದ್ಯಾರ್ಥಿನಿ " ನೇಣು ಬಿಗಿದು ಆತ್ಮಹತ್ಯೆ "

" ಶೃಂಗೇರಿಯಲ್ಲಿ ಭೀಕರ ಅಪಘಾತ "