ಭೀಕರ ರಸ್ತೆ ಅಪಘಾತ: ಓರ್ವ ಸಾವು, 15 ಕ್ಕೂ ಹೆಚ್ಚು ಮಂದಿಗೆ ಗಾಯ..!

ಭೀಕರ ರಸ್ತೆ ಅಪಘಾತ: ಓರ್ವ ಸಾವು, 15 ಕ್ಕೂ ಹೆಚ್ಚು ಮಂದಿಗೆ ಗಾಯ..!
ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಮಾಚಹಳ್ಳಿ ಸಮೀಪ ಶನಿವಾರ ಸರ್ಕಾರಿ ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.


ಚನ್ನಪಟ್ಟಣ ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಶ್ರೀ ಚಾಮುಂಡೇಶ್ವರಿ ದೇವಾಲಯದಿಂದ ನೂರಕ್ಕೂ ಹೆಚ್ಚು ಭಕ್ತರನ್ನು ಹೊತ್ತು ಮದ್ದೂರು ನಗರದ ಕಡೆಗೆ ಬರುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಬಸ್, ಮಾಚಹಳ್ಳಿ ಸಮೀಪಕ್ಕೆ ತಲುಪುವ ವೇಳೆಗೆ ಈ ದುರಂತ ಸಂಭವಿಸಿದೆ. ಮದ್ದೂರಿನಿಂದ ತುಮಕೂರು ಕಡೆಗೆ ತೆರಳುತ್ತಿದ್ದ ಕಾರೊಂದಕ್ಕೆ ಬಸ್‌ನ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮತ್ತೊಬ್ಬ ಮಹಿಳೆ ಗಂಭೀರವಾಗಿ ಗಾಯಗೊಂಡು, ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಗಿದೆ.
ಅಪಘಾತದಲ್ಲಿ ಸಾರಿಗೆ ಬಸ್‌ನಲ್ಲಿದ್ದ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಮದ್ದೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಈ ಘಟನೆಯಿಂದ ರಸ್ತೆಯಲ್ಲಿ ಸಂಚಾರಕ್ಕೆ ತಾತ್ಕಾಲಿಕವಾಗಿ ಅಡ್ಡಿಯಾಗಿದ್ದು, ಕೆಸ್ತೂರು ಪೊಲೀಸರು ತಕ್ಷಣವೇ ಸ್ಥಳಕ್ಕೆ ಆಗಮಿಸಿ ಸಂಚಾರವನ್ನು ಸರಾಗಗೊಳಿಸಿದರು.. ಗಾಯಾಳುಗಳನ್ನು ಖಾಸಗಿ ವಾಹನಗಳ ಮೂಲಕ ಆಸ್ಪತ್ರೆಗೆ ರವಾನಿಸಲಾಯಿತು.

ಕೆಸ್ತೂರು ಪೊಲೀಸ್ ಠಾಣೆಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.

Comments

Popular posts from this blog

ಶೃಂಗೇರಿ ಮೂಲದ ಮುಸ್ಲಿಂ ಕುಟುಂಬ ಚಲಿಸುತ್ತಿದ್ದ ಕಾರು ಅಪಘಾತ : 3 ಮಕ್ಕಳು ಸೇರಿ ಓರ್ವ ವೃದ್ದೆ ಸಾವು..!

"ದ್ವಿತೀಯ ಪಿಯುಸಿ ವಿದ್ಯಾರ್ಥಿನಿ " ನೇಣು ಬಿಗಿದು ಆತ್ಮಹತ್ಯೆ "

" ಶೃಂಗೇರಿಯಲ್ಲಿ ಭೀಕರ ಅಪಘಾತ "