ದಾಬಸ್ ಪೇಟೆ: ಸಾಲ ತೀರಿಸಲಾಗದೇ ಮನನೊಂದು ಯುವಕ ಆತ್ಮಹತ್ಯೆ..!

ದಾಬಸ್ ಪೇಟೆ: ಸಾಲ ತೀರಿಸಲಾಗದೇ ಮನನೊಂದು ಯುವಕ ಆತ್ಮಹತ್ಯೆ..!
ದಾಬಸ್ ಪೇಟೆ: ಸಾಲ ತೀರಿಸಲಾಗದೇ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ದಾಬಸ್‌ಪೇಟೆಯಲ್ಲಿ ನಡೆದಿದೆ.

ಪಟ್ಟಣದ ಜಯರಾಮು ಬಡಾವಣೆ ನಿವಾಸಿ ಚೇತನ್ (28) ಮೃತಪಟ್ಟ ಯುವಕ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಚೇತನ್‌ ನಾಲ್ಕೈದು ತಿಂಗಳಿಂದ ನಿರುದ್ಯೋಗಿಯಾಗಿದ್ದ.

ಕೆಲವರಿಂದ‌ ಒಂದೂವರೆ ಲಕ್ಷ ಸಾಲ ಪಡೆದಿದ್ದ. ಅದನ್ನು ತೀರಿಸಲಾಗದೆ ಮನನೊಂದು ಮನೆಯಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ‍ಪ್ರಕರಣ ದಾಖಲಿಸಿಕೊಂಡಿರುವ ದಾಬಸ್‌ಪೇಟೆ ಪೊಲೀಸರು ತಿಳಿಸಿದ್ದಾರೆ.

Comments

Popular posts from this blog

ಶೃಂಗೇರಿ ಮೂಲದ ಮುಸ್ಲಿಂ ಕುಟುಂಬ ಚಲಿಸುತ್ತಿದ್ದ ಕಾರು ಅಪಘಾತ : 3 ಮಕ್ಕಳು ಸೇರಿ ಓರ್ವ ವೃದ್ದೆ ಸಾವು..!

"ದ್ವಿತೀಯ ಪಿಯುಸಿ ವಿದ್ಯಾರ್ಥಿನಿ " ನೇಣು ಬಿಗಿದು ಆತ್ಮಹತ್ಯೆ "

" ಶೃಂಗೇರಿಯಲ್ಲಿ ಭೀಕರ ಅಪಘಾತ "