"ಕೊಪ್ಪ ಬಸರಿಕಟ್ಟೆ ಶಾಲೆಯ ಅತಿಥಿ ಶಿಕ್ಷಕಿಯನ್ನು ವಿವಸ್ತ್ರಗೊಳಿಸಿ ಹಲ್ಲೆ ಓರ್ವ ಆರೋಪಿ ಬಂಧನಕ್ಕೆ "
"ಕೊಪ್ಪ ಬಸರಿಕಟ್ಟೆ ಶಾಲೆಯ ಅತಿಥಿ ಶಿಕ್ಷಕಿಯನ್ನು ವಿವಸ್ತ್ರಗೊಳಿಸಿ ಹಲ್ಲೆ ಓರ್ವ ಆರೋಪಿ ಬಂಧನಕ್ಕೆ "
ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪ ತಾಲ್ಲೂಕಿನ ಜಯಪುರದ ಬಸರಿಕಟ್ಟೆ ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕಿಯ ಮೇಲೆ ಹಲ್ಲೆ ನಡೆದಿದೆ. ಶಾಲೆ ಮುಗಿಸಿ ಮನೆಗೆ ಹೋಗುತ್ತಿದ್ದ 25 ವರ್ಷದ ಶಿಕ್ಷಕಿಯನ್ನು ದುಷ್ಕರ್ಮಿಗಳು ವಿವಸ್ತ್ರಗೊಳಿಸಿ, ಸೀರೆಯಿಂದ ಮರಕ್ಕೆ ಕಟ್ಟಿ, ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ಅವರ ಕೂಗು ಕೇಳಿದ ಸ್ಥಳೀಯರು ಕೂಡಲೇ ಧಾವಿಸಿ ರಕ್ಷಣೆ ಮಾಡಿ, ಕೊಪ್ಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ಕರೆದೊಯ್ಯಲಾಗಿದೆ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಆರೋಪಿಗಳ ಬಂಧನಕ್ಕೆ ಮೂರು ತಂಡಗಳನ್ನು ರಚಿಸಿದ್ದು. ಈಗಾಗಲೇ ಚಂದುವಳ್ಳಿ ಗ್ರಾಮ ಭವಿತ್ ಎಂಬ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಜಯಪುರ ಪೊಲೀಸರು ಯಶಸ್ವಿಯಾಗಿದ್ದಾರೆ.
Comments
Post a Comment