ಚಾಮರಾಜನಗರದಲ್ಲಿ ಭೀಕರ ಅಪಘಾತ : ಕಾರ್ ಗೆ ಟಿಪ್ಪರ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ದುರ್ಮರಣ!

ಚಾಮರಾಜನಗರದಲ್ಲಿ ಭೀಕರ ಅಪಘಾತ : ಕಾರ್ ಗೆ ಟಿಪ್ಪರ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ದುರ್ಮರಣ!
ಚಾಮರಾಜನಗರ : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ಟಿಪ್ಪರ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮಾದಪಟ್ಟಣದಲ್ಲಿ ಈ ಒಂದು ಅಪಘಾತ ಸಂಭವಿಸಿದ್ದು, ಚಾಲಕ ಸೇರಿ ಮೂವರ ಸ್ಥಿತಿ ಗಂಭೀರವಾಗಿದ್ದು ಮೈಸೂರು ಆಸ್ಪತ್ರೆಗೆ ಅವರನ್ನು ಶಿಫ್ಟ್ ಮಾಡಲಾಗಿದೆ.

ಮೃತರನ್ನು ಕೇರಳದ ಕಲ್ಪಟ್ಟ ಮೂಲದ ರಶೀದ್ (40) ಮತ್ತು ನಜೀರಾ (38) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಬೇಗೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಬೇಗುರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Popular posts from this blog

ಶೃಂಗೇರಿ ಮೂಲದ ಮುಸ್ಲಿಂ ಕುಟುಂಬ ಚಲಿಸುತ್ತಿದ್ದ ಕಾರು ಅಪಘಾತ : 3 ಮಕ್ಕಳು ಸೇರಿ ಓರ್ವ ವೃದ್ದೆ ಸಾವು..!

"ದ್ವಿತೀಯ ಪಿಯುಸಿ ವಿದ್ಯಾರ್ಥಿನಿ " ನೇಣು ಬಿಗಿದು ಆತ್ಮಹತ್ಯೆ "

" ಶೃಂಗೇರಿಯಲ್ಲಿ ಭೀಕರ ಅಪಘಾತ "