"ಗೂಡ್ಸ್ ವಾಹನ ಮರಕ್ಕೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು..!"


"ಗೂಡ್ಸ್ ವಾಹನ ಮರಕ್ಕೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು..!"
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನವೊಂದು ಮರಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ.

ಜಿಲ್ಲೆಯ ಹೊನ್ನಾಳಿ ರಸ್ತೆಯ ತಾವರೆ ಚಟ್ನಳ್ಳಿ ಹಾಗೂ ಗೊಂದಿ ಚಟ್ನಳ್ಳಿ ಗ್ರಾಮದ ನಡುವಿನ ಕೆರೆ ಬಳಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಸಾದೀಕ್(40), ಫಿರೋಜ್(30) ಮತ್ತು ಅಸಾದುಲ್ಲಾ(25) ಎಂಬವರು ಮೃತಪಟ್ಟಿದ್ದಾರೆ.
ಗೂಡ್ಸ್ ವಾಹನ ಚಾಲಕ ನಿದ್ದೆ ಮಂಪರಿನಲ್ಲಿ ರಸ್ತೆ ಬದಿಯ ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಡಿಕ್ಕಿಯ ರಭಸಕ್ಕೆ ಗೂಡ್ಸ್ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.

ವಾಹನದಲ್ಲಿದ್ದ ಸಾದೀಕ್ ಹಾಗೂ ಫಿರೋಜ್ ಉತ್ತರ ಪ್ರದೇಶದವರಾಗಿದ್ದರೆ, ಅಸಾದುಲ್ಲಾ ಚನ್ನಗಿರಿಯ ನಿವಾಸಿ. ಚಾಲಕ ಇರ್ಫಾನ್(40) ಗಾಯಗೊಂಡಿದ್ದು, ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ಗೂಡ್ಸ್ ವಾಹನದಲ್ಲಿದ್ದವರು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ಫರ್ನಿಚರ್ ಕೆಲಸ ಮುಗಿಸಿ ವಾಪಸ್ ಆಗುತ್ತಿದ್ದರು. ಈ ವೇಳೆ, ಮರಕ್ಕೆ ಡಿಕ್ಕಿಯಾಗಿ ಅಪಘಾತವಾಗಿದೆ‌. ಮೃತರು ಕಳೆದ ಹಲವು ದಿನಗಳಿಂದ ತಾವರೆ ಚಟ್ನಳ್ಳಿ ಗ್ರಾಮದಲ್ಲಿಯೇ ವಾಸವಾಗಿದ್ದರು. ಮನೆ ಸೇರಲು ಇನ್ನೇನು ಒಂದು ಕಿಲೋ ಮೀಟರ್ ಮಾತ್ರ ಇತ್ತು. ಆದರೆ, ನಿದ್ದೆ ಮಂಪರಿನಲ್ಲಿದ್ದ ಚಾಲಕ ಮರಕ್ಕೆ ಡಿಕ್ಕಿ ಹೊಡೆದಿದ್ದಾನೆ.

Comments

Popular posts from this blog

ಶೃಂಗೇರಿ ಮೂಲದ ಮುಸ್ಲಿಂ ಕುಟುಂಬ ಚಲಿಸುತ್ತಿದ್ದ ಕಾರು ಅಪಘಾತ : 3 ಮಕ್ಕಳು ಸೇರಿ ಓರ್ವ ವೃದ್ದೆ ಸಾವು..!

"ದ್ವಿತೀಯ ಪಿಯುಸಿ ವಿದ್ಯಾರ್ಥಿನಿ " ನೇಣು ಬಿಗಿದು ಆತ್ಮಹತ್ಯೆ "

" ಶೃಂಗೇರಿಯಲ್ಲಿ ಭೀಕರ ಅಪಘಾತ "