"ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ಶಿಕ್ಷಕಿ ಮೇಲೆ ಅಟ್ಯಾಕ್ ಮಾಡಿದ ಷಂಡರು"
"ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ಶಿಕ್ಷಕಿ ಮೇಲೆ ಅಟ್ಯಾಕ್ ಮಾಡಿದ ಷಂಡರು"
ಕೊಪ್ಪ: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಸಮೀಪದ ಬಸರೀಕಟ್ಟೆ ಗ್ರಾಮದಲ್ಲಿ ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕಿಯೊಬ್ಬರ ಮೇಲೆ ದೌರ್ಜನ್ಯ ನಡೆಸಿರುವ ಆರೋಪವೊಂದು ಕೇಳಿ ಬಂದಿದೆ. ಸುಮಾರು 24 ವರ್ಷ ವಯಸ್ಸಿನ ಅತಿಥಿ ಶಿಕ್ಷಕಿ ಸಂಜೆ ಶಾಲೆ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಕಿಡಿಗೇಡಿಗಳ ದುಷ್ಕೃತ್ಯಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.
ಮಾಸ್ಕ್ ಧರಿಸಿದ್ದ ಅಪರಿಚಿತ ವ್ಯಕ್ತಿಯೊಬ್ಬ ಶಿಕ್ಷಕಿ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ದುಷ್ಕರ್ಮಿಗಳು ಯುವತಿಯ ತಲೆಗೆ ರಾಡ್‌ನಿಂದ ಹಲ್ಲೆ ಮಾಡಿದ್ದಾರೆ ಎನ್ನಲಾಗಿದ್ದು, ನಂತರ ಆಕೆಯನ್ನು ಅಡಿಕೆ ಮರಕ್ಕೆ ಕಟ್ಟಿ ಹಾಕಲು ಪ್ರಯತ್ನಿಸಿದ್ದಾರೆ ಎಂಬ ಗಂಭೀರ ಆರೋಪವು ಕೇಳಿಬಂದಿದೆ.
ಆದರೆ, ಯುವತಿ ಜೋರಾಗಿ ಕೂಗಾಡುತ್ತಿದ್ದ ಧ್ವನಿಯನ್ನು ಕೇಳಿದ ಸ್ಥಳೀಯರು ತಕ್ಷಣ ರಕ್ಷಣೆಗೆ ಧಾವಿಸಿದ ಕಾರಣ, ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ದೌರ್ಜನ್ಯದಿಂದಾಗಿ ನಿತ್ರಾಣವಾಗಿ ಗಾಯಗೊಂಡಿದ್ದ ಶಿಕ್ಷಕಿಯನ್ನು ಕೂಡಲೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅತ್ಯಾಚಾರ ಯತ್ನದ ಹಿಂದೆ ಪರಿಚಿತರೇ ಇರುವ ಸಾಧ್ಯತೆಯ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಸಂಬಂಧ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ
Comments
Post a Comment