ಕೊಪ್ಪ: ರಸ್ತೆ ಗುಂಡಿಗಳ ವಿರುದ್ಧ ಬೃಹತ್‌ ಪ್ರತಿಭಟನೆಗೆ ಮುಂದಾದ ಜೆಡಿಎಸ್‌ಸ್

ಕೊಪ್ಪ: ರಸ್ತೆ ಗುಂಡಿಗಳ ವಿರುದ್ಧ ಬೃಹತ್‌ ಪ್ರತಿಭಟನೆಗೆ ಮುಂದಾದ ಜೆಡಿಎಸ್‌ಸ್
ಕೊಪ್ಪ: ಶೃಂಗೇರಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಆಗುತ್ತಿಲ್ಲ. ರಸ್ತೆಗಳು ಗುಂಡಿ ಬಿದ್ದಿದ್ದರೂ ಮುಚ್ಚುವ ಕೆಲಸ ಮಾಡುತ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಅಕ್ಟೋಬರ್ 29ರಂದು ಪ್ರತಿಭಟನೆ ನಡೆಸಲು ಜೆಡಿಎಸ್‌ ಮುಂದಾಗಿದೆ. ಕೊಪ್ಪದ ಮೇಲಿನ ಪೇಟೆಯಲ್ಲಿರುವ ಕುವೆಂಪು ವೃತ್ತದಿಂದ ಬಸ್ ನಿಲ್ದಾಣದವರೆಗೆ ಪ್ರತಿಭಟನಾ ಮೆರವಣಿಗೆ ಹಾಗೂ ಬಸ್‌ ನಿಲ್ದಾಣದಲ್ಲಿ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ.
ಫಾರಂ ನಂ. 94ಸಿ, 94ಸಿಸಿ ಅಡಿಯಲ್ಲಿ ಹಕ್ಕುಪತ್ರಕ್ಕೆ ಅರ್ಜಿ ಸಲ್ಲಿಸಿದವರಿಗೆ ಹಕ್ಕುಪತ್ರ ನೀಡುತ್ತಿಲ್ಲ. ಕೊಪ್ಪ ತಾಲೂಕಿನಲ್ಲಿ ಅಕ್ರಮ-ಸಕ್ರಮ ಸಭೆ ನಡೆಸುತ್ತಿಲ್ಲ. ಇದರಿಂದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಜೆಡಿಎಸ್‌ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಂದಾಯ ಭೂಮಿ ಒತ್ತುವರಿ ವಿಚಾರವಾಗಿ ಸರ್ಕಾರ ಎಸ್‌ಐಟಿ ರಚನೆ ಮಾಡಲು ಮುಂದಾಗಿದೆ. ಇದರಿಂದ ರೈತರಿಗೆ ಆತಂಕ ಎದುರಾಗಿದ್ದು. ಕಂದಾಯ ಭೂಮಿಯಲ್ಲಿ ರೈತರಿಗೆ ಜಮೀನುಗಳನ್ನು ಮಂಜೂರು ಮಾಡುವ ಬದಲು ಸರ್ಕಾರ ಕಿತ್ತುಕೊಳ್ಳುತ್ತಿದೆ ಎಂದು ಆರೋಪಿಸಲಾಗಿದೆ.

ಅಲ್ಲದೇ ಕ್ಷೇತ್ರದಲ್ಲಿ ಶಾಲಾ ಮಕ್ಕಳಿಗೆ ಸರಿಯಾದ ಸಾರಿಗೆ ವ್ಯವಸ್ಥೆಯಿಲ್ಲ ಈ ಬಗ್ಗೆ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸುಧಾಕರ್ ಶೆಟ್ಟಿ ನೇತ್ರತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ಕಗ್ಗಾ ರಾಮಸ್ವಾಮಿ ತಿಳಿಸಿದ್ದಾರೆ.

Comments

Popular posts from this blog

ಶೃಂಗೇರಿ ಮೂಲದ ಮುಸ್ಲಿಂ ಕುಟುಂಬ ಚಲಿಸುತ್ತಿದ್ದ ಕಾರು ಅಪಘಾತ : 3 ಮಕ್ಕಳು ಸೇರಿ ಓರ್ವ ವೃದ್ದೆ ಸಾವು..!

"ದ್ವಿತೀಯ ಪಿಯುಸಿ ವಿದ್ಯಾರ್ಥಿನಿ " ನೇಣು ಬಿಗಿದು ಆತ್ಮಹತ್ಯೆ "

" ಶೃಂಗೇರಿಯಲ್ಲಿ ಭೀಕರ ಅಪಘಾತ "