ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ: ಕೋಲಾರದ ಇಬ್ಬರು ಮಕ್ಕಳು ಸೇರಿ 5 ಜನಸ್ಥಳದಲ್ಲೇ ಸಾವು..!
ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ: ಕೋಲಾರದ ಇಬ್ಬರು ಮಕ್ಕಳು ಸೇರಿ 5 ಜನಸ್ಥಳದಲ್ಲೇ ಸಾವು..! ಕೋಲಾರ :ಆಂಧ್ರಪ್ರದೇಶದಲ್ಲಿ ನಡೆದ ನಡೆದ ಕರ್ನೂಲ್ ಜಿಲ್ಲೆಯ ಎಮ್ಮಿಗನೂರು ತಾಲೂಕಿನ ಕೋಟೆಕಲ್ ಗ್ರಾಮದ ಬಳಿ ಎರಡು ಕಾರ್ ಗಳ ನಡುವೆ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಐವರು ಮೃತಪಟ್ಟಿದ್ದು, ಹಲವಾರು ಗಾಯಗೊಂಡಿದ್ದಾರೆ. ಭೀಕರ ಅಪಘಾತದಲ್ಲಿ ಕರ್ನಾಟಕದ ಕೋಲಾರ ಜಿಲ್ಲೆಯ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಚಿಕ್ಕಹೊಸಹಳ್ಳಿ ನಿವಾಸಿಗಳಾದ ಸತೀಶ್, ಮೀನಾಕ್ಷಿ ಕುಟುಂಬದವರು ಮೃತಪಟ್ಟಿದ್ದಾರೆ ಎನ್ನುವುದು ಪತ್ತೆಯಾಗಿದೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಯಮ್ಮಿಗನೂರು ಬಳಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೋಲಾರ ಮೂಲದ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ. ಅಪಘಾತದ ವಿವರಗಳು ಸ್ಥಳ: ಆಂಧ್ರಪ್ರದೇಶದ : ಕರ್ನೂಲ್ ಜಿಲ್ಲೆಯ ಕೋಟೆಕಲ್ ಗ್ರಾಮದ ಘಾಟಿ ತಿರುವಿನಲ್ಲಿ ಈ ಘಟನೆ ಸಂಭವಿಸಿದೆ. ಸಮಯ ಮತ್ತು ಕಾರಣ: ನವೆಂಬರ್ 29, 2025 ರ ಶನಿವಾರ ಮುಂಜಾನೆ 4 ಗಂಟೆ ಸುಮಾರಿಗೆ ದಟ್ಟ ಮಂಜು ಮತ್ತು ಕಳಪೆ ಗೋಚರತೆಯಿಂದಾಗಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದಿವೆ. ಎರಡೂ ವಾಹನಗಳು ಅತಿ ವೇಗದಲ್ಲಿ ಚಲಿಸುತ್ತಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ. ...