“ಶಬರಿಮಲೆ ಯಾತ್ರೆಗೆ ತೆರಳುತ್ತಿದ್ದ ಭಕ್ತರ ಬಸ್ ಪಲ್ಟಿ: ತಪ್ಪಿದ ದೊಡ್ಡ ದುರಂತ.!"
“ಶಬರಿಮಲೆ ಯಾತ್ರೆಗೆ ತೆರಳುತ್ತಿದ್ದ ಭಕ್ತರ ಬಸ್ ಪಲ್ಟಿ: ತಪ್ಪಿದ ದೊಡ್ಡ ದುರಂತ.!"
ಮಂಡ್ಯ:- ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಯಾಲದಹಳ್ಳಿ ಕೊಪ್ಪಲಿನಿಂದ ಶಬರಿಮಲೆಗೆ ತೆರಳುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳು ಕೂದಲೆಳೆ ಅಂತರದಲ್ಲಿ ಭಾರೀ ದುರಂತದಿಂದ ಪಾರಾದ ಘಟನೆ ಕೇರಳದ ಏರಿಮಲೈ ಸಮೀಪ ನಡೆದಿದೆ.
ಯಾಲದಹಳ್ಳಿ ಕೊಪ್ಪಲು ಗ್ರಾಮದ ಒಟ್ಟು 33 ಮಂದಿ ಭಕ್ತರು ಮಾಲೆ ಧರಿಸಿ ಸ್ವಾಮಿ ದರ್ಶನಕ್ಕಾಗಿ ವಿಶೇಷ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದರೂ, ಅದೃಷ್ಟವಶಾತ್ ಬಸ್‌ನಲ್ಲಿದ್ದ ಎಲ್ಲರೂ ಜೀವಂತವಾಗಿ ಪಾರಾಗಿದ್ದಾರೆ. ಕೆಲವು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯರು ಮತ್ತು ಪೊಲೀಸರು ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಒದಗಿಸಿದ್ದಾರೆ.
ಘಟನಾ ಸ್ಥಳಕ್ಕೆ ಏರಿಮಲೈ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ಅನಾಹುತವಾಗದಿರುವುದು ಭಕ್ತರಿಗೆ ದೊಡ್ಡ ಸಮಾಧಾನ ತಂದಿದೆ. ಶಬರಿಮಲೆ ಯಾತ್ರೆಯ ಮೊದಲ ಹಂತದಲ್ಲೇ ಸಂಭವಿಸಿದ ಈ ಅಪಘಾತ ಕ್ಷಣ ಮಾತ್ರದಲ್ಲಿ ದೊಡ್ಡ ದುರಂತವಾಗಬಹುದಿತ್ತು ಎಂಬ ಆತಂಕವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.
Comments
Post a Comment