ಮಣಿಪಾಲದ “ಡೆಲ್ಲಿ ಡಾಬಾ”ದಲ್ಲಿ ಶಾರ್ಟ್ ಸರ್ಕ್ಯೂಟ್: ಪ್ರಾಣಾಪಾಯದಿಂದ ಪಾರು

ಮಣಿಪಾಲದ “ಡೆಲ್ಲಿ ಡಾಬಾ”ದಲ್ಲಿ ಶಾರ್ಟ್ ಸರ್ಕ್ಯೂಟ್: ಪ್ರಾಣಾಪಾಯದಿಂದ ಪಾರು
ಉಡುಪಿ: ನಗರದ ಮಣಿಪಾಲದ ಡೆಲ್ಲಿ ಡಾಬಾ ಉಪಹಾರ ಗೃಹದಲ್ಲಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ ಹಿನ್ನೆಲೆ ಎರಡು ಗ್ಯಾಸ್ ಸಿಲಿಂಡರ್‌ಗಳು ಸ್ಫೋಟಗೊಂಡ ಘಟನೆ ಮಂಗಳವಾರ ಸಂಭವಿಸಿದೆ. ಘಟನೆ ನಡೆದ ತಕ್ಷಣ ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯಾವುದೇ ರೀತಿಯ ಅನುಮಾನಾಸ್ಪದ ವಿಚಾರಗಳು ಕಂಡುಬಂದಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.
ಡಾಬಾದ ಒಳಭಾಗದಲ್ಲಿದ್ದ ಸಿಲಿಂಡರ್‌ಗಳು ಶಾರ್ಟ್ ಸರ್ಕ್ಯೂಟ್ ಕಾರಣದಿಂದ ಸ್ಫೋಟಗೊಂಡಿದ್ದರೂ, ಅದೃಷ್ಟವಶಾತ್ ಯಾರಿಗೂ ಯಾವುದೇ ಗಾಯಗಳಾಗಿಲ್ಲ. ಸ್ಥಳದಲ್ಲಿ ಅಗ್ನಿ ನಂದಿಸುವ ಕಾರ್ಯ ಕೂಡ ತಕ್ಷಣ ಕೈಗೊಳ್ಳಲಾಗಿದೆ.

ಈ ಕುರಿತು ಸ್ಪಷ್ಟನೆ ನೀಡಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಢಾಧಿಕಾರಿ ಹರಿರಾಂ ಶಂಕರ್, ಘಟನೆಯ ಬಗ್ಗೆ ಸುಳ್ಳು ಸುದ್ದಿ ಅಥವಾ ವದಂತಿ ಹರಡುವ ಅಗತ್ಯವಿಲ್ಲ. ಯಾವುದೇ ಅನುಮಾನಾಸ್ಪದ ಅಂಶ ಕಂಡುಬಂದಿಲ್ಲ. ಸಾರ್ವಜನಿಕರು ಸುಳ್ಳು ಸುದ್ದಿಗಳನ್ನು ನಂಬಬಾರದು ಎಂದು ಹೇಳಿದ್ದಾರೆ.

Comments

Popular posts from this blog

ಶೃಂಗೇರಿ ಮೂಲದ ಮುಸ್ಲಿಂ ಕುಟುಂಬ ಚಲಿಸುತ್ತಿದ್ದ ಕಾರು ಅಪಘಾತ : 3 ಮಕ್ಕಳು ಸೇರಿ ಓರ್ವ ವೃದ್ದೆ ಸಾವು..!

"ದ್ವಿತೀಯ ಪಿಯುಸಿ ವಿದ್ಯಾರ್ಥಿನಿ " ನೇಣು ಬಿಗಿದು ಆತ್ಮಹತ್ಯೆ "

" ಶೃಂಗೇರಿಯಲ್ಲಿ ಭೀಕರ ಅಪಘಾತ "