"ಕಿರು ವಿಮಾನ ನಿಲ್ದಾಣ ಭೂಸ್ವಾಧೀನಕ್ಕೆ ಪ್ರಾಥಮಿಕ ಅಧಿಸೂಚನೆ ಪ್ರಕಟ..!"
"ಕಿರು ವಿಮಾನ ನಿಲ್ದಾಣ ಭೂಸ್ವಾಧೀನಕ್ಕೆ ಪ್ರಾಥಮಿಕ ಅಧಿಸೂಚನೆ ಪ್ರಕಟ..!" ಚಿಕ್ಕಮಗಳೂರು: ಕಾಫಿನಾಡಿನ ಬಹುದಿನಗಳ ಕನಸಾದ ಏರ್-ಸ್ಟ್ರಿಪ್ (ಕಿರು ವಿಮಾನ ನಿಲ್ದಾಣ) ಯೋಜನೆಗೆ ಪೂರಕವಾಗಿ ಭೂಸ್ವಾಧೀನ ಪ್ರಕ್ರಿಯೆಯು ಈಗ ಅಧಿಕೃತವಾಗಿ ಚಾಲನೆ ಪಡೆದುಕೊಂಡಿದೆ. ಚಿಕ್ಕಮಗಳೂರು ಮತ್ತು ಹಿರೇಮಗಳೂರು ವ್ಯಾಪ್ತಿಯಲ್ಲಿ ಜಮೀನು ಗುರುತಿಸಿ ಜಿಲ್ಲಾಧಿಕಾರಿಗಳ ಕಚೇರಿಯಿಂದ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದ್ದು, ಈ ಬಗ್ಗೆ ರಾಜ್ಯ ಪತ್ರದಲ್ಲಿ ಸಾರ್ವಜನಿಕ ಪ್ರಕಟಣೆಯೂ ಹೊರಬಿದ್ದಿದೆ. ಭೂಸ್ವಾಧೀನ ಕಾಯ್ದೆ 2013ರ ಕಲಂ 11(1)ರ ಅಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಯೋಜನೆಯ ಒಟ್ಟು ಅನುಷ್ಠಾನಕ್ಕಾಗಿ 31 ಎಕರೆಗೂ ಅಧಿಕ ಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಉದ್ದೇಶ ಹೊಂದಲಾಗಿದೆ. ಸದ್ಯ 16.31 ಎಕರೆ ಬಾಕಿ ಜಮೀನನ್ನು ಪ್ರಕ್ರಿಯೆಗೆ ಒಳಪಡಿಸಲು ನಿರ್ಧರಿಸಲಾಗಿದ್ದು, ಸಂತ್ರಸ್ತರಿಗೆ ಪಾರದರ್ಶಕವಾಗಿ ಸೂಕ್ತ ಪರಿಹಾರ ಮತ್ತು ಪುನರ್ ವಸತಿ ಕಲ್ಪಿಸಲು ಸರ್ಕಾರ ಬದ್ಧವಾಗಿದೆ. ಈ ಮಹತ್ವಾಕಾಂಕ್ಷೆಯ ಯೋಜನೆಗೆ ಚಿಕ್ಕಮಗಳೂರು ಮತ್ತು ಹಿರೇಮಗಳೂರು ನಡುವೆ ಒಟ್ಟು 137 ಎಕರೆ ಜಮೀನನ್ನು ಈಗಾಗಲೇ ಗುರುತಿಸಲಾಗಿದೆ. ಈ ಪೈಕಿ 120 ಎಕರೆ ಸರ್ಕಾರಿ ಜಮೀನಾಗಿದ್ದು, ಉಳಿದ 16.31 ಎಕರೆ ಖಾಸಗಿ ಜಮೀನಿನ ಸ್ವಾಧೀನ ಪ್ರಕ್ರಿಯೆ ಬಾಕಿ ಉಳಿದಿದೆ. ಆದರೆ, ಈ ಪ್ರದೇಶದಲ್ಲಿ ಜಮೀನು ಹೊಂದಿರುವ ಕೃಷಿಕರು ಭೂಮಿ ಬಿಟ್ಟುಕೊಡಲು ನಿರಾಸಕ್ತಿ ತ...