" ತಾಯಿ ಸಾವಿನಿಂದ ಮನನೊಂದು ಮಗ ಆತ್ಮಹತ್ಯೆ..!"

" ತಾಯಿ ಸಾವಿನಿಂದ ಮನನೊಂದು ಮಗ ಆತ್ಮಹತ್ಯೆ..!"
ಕೋಲಾರ : ತಾಯಿ ಸಾವಿನಿಂದ ಮನನೊಂದ ಮಗ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮ್ಮರೆಡ್ಡಿಹಳ್ಳಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಹೆಬ್ಬಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಮ್ಮರೆಡ್ಡಿಹಳ್ಳಿಯ ಅಭಿಷೇಕ್ (18) ಮೃತರು.

ಅಭಿಷೇಕ್ ಮುಳಬಾಗಿಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿ.ಕಾಂ ಓದಿತ್ತಿದ್ದರು. ತಾಯಿ ಎಂದರೆ ಬಹಳ ಪ್ರೀತಿ. 20 ದಿನಗಳ ಹಿಂದೆ ಅನಾರೋಗ್ಯದಿಂದ ಅಭಿಷೇಕ್ ತಾಯಿ ರಾಧ (39) ಮೃತಪಟ್ಟಿದ್ದರು. ಈ ನೋವಿನಿಂದ ಹೊರಬರಲಾಗದೆ ಅಭಿಷೇಕ್ ಸೋಮವಾರ ತೋಟಕ್ಕೆ ಸಿಂಪಡಿಸುವ ಔಷಧಿ ಕುಡಿದಿದ್ದಾನೆ. ಈ ವಿಚಾರ ತಿಳಿದ ಸ್ಥಳೀಯರು ಕೂಡಲೇ ಕೋಲಾರ ಜಾಲಪ್ಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪರಿಸ್ಥಿತಿ ಕೈ ಮೀರಿದ್ದು ಮೃತಪಟ್ಟಿದ್ದಾನೆ.

ಮೃತರ ಅಂತ್ಯಕ್ರಿಯೆ ತಮ್ಮರೆಡ್ಡಿಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆಯಿತು.

Comments

Popular posts from this blog

ಶೃಂಗೇರಿ ಮೂಲದ ಮುಸ್ಲಿಂ ಕುಟುಂಬ ಚಲಿಸುತ್ತಿದ್ದ ಕಾರು ಅಪಘಾತ : 3 ಮಕ್ಕಳು ಸೇರಿ ಓರ್ವ ವೃದ್ದೆ ಸಾವು..!

"ದ್ವಿತೀಯ ಪಿಯುಸಿ ವಿದ್ಯಾರ್ಥಿನಿ " ನೇಣು ಬಿಗಿದು ಆತ್ಮಹತ್ಯೆ "

" ಶೃಂಗೇರಿಯಲ್ಲಿ ಭೀಕರ ಅಪಘಾತ "