ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸೋ ಘಟನೆ : ಡಿವೋರ್ಸ್ ಕೊಟ್ಟ ಪತ್ನಿಯನ್ನು ಗುಂಡಿಕ್ಕಿ ಹತ್ಯೆಗೈದ ಪಾಪಿಪತಿ.!

ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸೋ ಘಟನೆ : ಡಿವೋರ್ಸ್ ಕೊಟ್ಟ ಪತ್ನಿಯನ್ನು ಗುಂಡಿಕ್ಕಿ ಹತ್ಯೆಗೈದ ಪಾಪಿಪತಿ.!
ಬೆಂಗಳೂರು: ನಗರದಲ್ಲಿ ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ಗುಂಡು ಹಾರಿಸಿ ಪತ್ನಿಯನ್ನೇ ಪತಿಯೊಬ್ಬ ಹತ್ಯೆಗೈದ ಘಟನೆ ನಡೆದಿದೆ.
ಬೆಂಗಳೂರಿನ ಬಸವೇಶ್ವರ ನಗರದ ವೆಸ್ಟಿನ್ ಹೋಟೆಲ್ ಬಳಿಯಲ್ಲಿ ಈ ದುಷ್ಕೃತ್ಯವನ್ನು ನಡೆಸಲಾಗಿದೆ. ಏಕಾಏಕಿ ಗನ್ ತೆಗೆದು ಪತ್ನಿ ಮೇಲೆ ಪತಿ ಫೈರಿಂಗ್ ಮಾಡಿದ್ದಾನೆ.

ನಡು ರಸ್ತೆಯಲ್ಲೇ ಗುಂಡು ಹಾರಿಸಿ ಪತ್ನಿಯನ್ನು ಬಾಲಮುರುಗನ್ ಎಂಬಾತ ಹತ್ಯೆಗೈದಿದ್ದಾನೆ.

ಅಂದಹಾಗೇ ಕೋರ್ಟ್ ನಲ್ಲಿ ದಂಪತಿಗಳ ವಿವಾಹ ವಿಚ್ಚೇಧನ ಅರ್ಜಿ ವಿಚಾರಣೆ ನಡೆಯುತ್ತಿದೆ. ಇಂದು ಇಬ್ಬರೂ ವಿಚಾರಣೆ ಮುಗಿಸಿಕೊಂಡು ಬಂದಿದ್ದರು. ಈ ವೇಳೆಯಲ್ಲಿ ಬಾಲಮುರುಗನ್ ಹಾಗೂ ಪತ್ನಿ ನಡುವೆ ಜಗಳ ಉಂಟಾಗಿದೆ.

ಜಗಳ ತಾರಕಕ್ಕೇರಿದಂತ ಸಂದರ್ಭದಲ್ಲಿ ಬಾಲಮುರುಗನ್ ತನ್ನ ಬಳಿಯಿದ್ದಂತ ಗನ್ ತೆಗೆದು ಪತ್ನಿಗೆ ಹೊಡೆದಿದ್ದಾರೆ. ಇದರಿಂದಾಗಿ ಬಾಲಮುರುಗನ್ ಪತ್ನಿ ತೀವ್ರ ರಕ್ತಸ್ತ್ರಾವದಿಂದ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಮಾಗಡಿರೋಡ್ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Comments

Popular posts from this blog

ಶೃಂಗೇರಿ ಮೂಲದ ಮುಸ್ಲಿಂ ಕುಟುಂಬ ಚಲಿಸುತ್ತಿದ್ದ ಕಾರು ಅಪಘಾತ : 3 ಮಕ್ಕಳು ಸೇರಿ ಓರ್ವ ವೃದ್ದೆ ಸಾವು..!

"ದ್ವಿತೀಯ ಪಿಯುಸಿ ವಿದ್ಯಾರ್ಥಿನಿ " ನೇಣು ಬಿಗಿದು ಆತ್ಮಹತ್ಯೆ "

" ಶೃಂಗೇರಿಯಲ್ಲಿ ಭೀಕರ ಅಪಘಾತ "