"ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾದ ಯುವಕನ ಮೃತದೇಹ..!"
"ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾದ ಯುವಕನ ಮೃತದೇಹ..!" ಶೃಂಗೇರಿ : ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ವಿದ್ಯಾರಣ್ಯಪುರ ದಲ್ಲಿ ಸ್ಟುಡಿಯೋ ಫೋಟೋಗ್ರಾಫರ್ ಅಶ್ವಥ್ ಆಚಾರ್ಯ (30) ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ಮನೆಯ ಹಿಂದಿನ ತೋಟದಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಶೃಂಗೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಅಶ್ವಥ್ ಅವರ ಸಾವು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಪೊಲೀಸರ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ. ಮೃತನ ಕುಟುಂಬದವರು ಹಾಗೂ ಸ್ನೇಹಿತರು ಆತನ ಸಾವು ಕೊಲೆಯಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.