ನಿಂತಿದ್ದ ಬೋರ್​ವೆಲ್​ ಲಾರಿಗೆ ಗುದ್ದಿದ ಬೊಲೆರೋ: ಓರ್ವ ಸ್ಥಳದಲ್ಲೇ ಸಾವು, 6 ಜನರ ಸ್ಥಿತಿ ಗಂಭೀರ..!

ನಿಂತಿದ್ದ ಬೋರ್​ವೆಲ್​ ಲಾರಿಗೆ ಗುದ್ದಿದ ಬೊಲೆರೋ: ಓರ್ವ ಸ್ಥಳದಲ್ಲೇ ಸಾವು, 6 ಜನರ ಸ್ಥಿತಿ ಗಂಭೀರ..!
ಕಲ್ಲತ್ತಿಗಿರಿಯಿಂದ ಎಂ.ಸಿ. ಹಳ್ಳಿಗೆ ಕಾರ್ಮಿಕರನ್ನು ಕರೆದುಕೊಂಡು ವಾಪಸಾಗುತ್ತಿದ್ದ ಬೊಲೆರೋ ಜೀಪ್​ ದಾರಿ ಮಧ್ಯೆ ಬೋರ್​ವೆಲ್​ ಲಾರಿಗೆ ಡಿಕ್ಕಿ ಹೊಡೆದಿದೆ.

ತರೀಕೆರೆ:   ನಿಂತಿದ್ದ ಬೋರ್​ವೆಲ್​ ಲಾರಿಗೆ ವೇಗವಾಗಿ ಬಂದ ಬೊಲೆರೋ ಜೀಪ್​ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ, 6 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ದೋರನಾಳು ಗ್ರಾಮದ ಹೊರವಲಯದಲ್ಲಿ ಬುಧವಾರ ರಾತ್ರಿ ಸಂಭವಿಸಿದೆ.
ಲಾರಿಗೆ ಜೀಪ್ ಡಿಕ್ಕಿ ಹೊಡೆದ ರಭಸಕ್ಕೆ ಜೀಪ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಬೊಲೆರೋ ಜೀಪ್‌ನಲ್ಲಿದ್ದ 7 ಜನರಲ್ಲಿ ಓರ್ವ ಸ್ಥಳದಲ್ಲೇ ಸಾವನಪ್ಪಿದ್ದಾನೆ. ತೀವ್ರವಾಗಿ ಗಾಯಗೊಂಡ 6 ಜನರ ಪರಿಸ್ಥಿತಿ ಚಿಂತಾಜನಕವಾಗಿದ್ದು, ಕೂಡಲೇ ಸ್ಥಳೀಯರು ಗಾಯಾಳುಗಳನ್ನು ತರೀಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದರು. ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಶಿವಮೊಗ್ಗದ ಜಿಲ್ಲಾಸ್ಪತ್ರೆ ಮೆಗ್ಗಾನ್​ಗೆ ರವಾನೆ ಮಾಡಲಾಗಿದೆ.
ತರೀಕೆರೆ ತಾಲೂಕಿನ ಎಂ.ಸಿ. ಹಳ್ಳಿಯಿಂದ ಬೊಲೆರೋ ಜೀಪ್​ನಲ್ಲಿ ಕಾರ್ಮಿಕರು ಕೂಲಿ ಕೆಲಸಕ್ಕೆ ಕಲ್ಲತ್ತಿಗಿರಿಗೆ ಹೋಗಿದ್ದರು. ಕಲ್ಲತ್ತಿಗಿರಿಯಿಂದ ಎಂ.ಸಿ. ಹಳ್ಳಿಗೆ ವಾಪಸಾಗುವಾಗ ದಾರಿ ಮಧ್ಯೆ ಬೋರ್​ವೆಲ್​ ಕೊರೆಯುವ ಲಾರಿಗೆ ಬೊಲೆರೋ ಡಿಕ್ಕಿ ಹೊಡೆದಿದೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳದಲ್ಲಿ ಜಮಾಯಿಸಿದ ಗ್ರಾಮಸ್ಥರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಸಹಾಯ ಮಾಡಿದರು. ಘಟನೆಯ ಕುರಿತಾಗಿ ಕೂಡಲೇ ಸ್ಥಳೀಯರು ತರೀಕೆರೆ ಪೊಲೀಸರು ಹಾಗೂ ಲಿಂಗದಹಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದು, ವಿಚಾರ ತಿಳಿದಕೂಡಲೇ ತರೀಕೆರೆ, ಲಿಂಗದಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಪಘಾತದಿಂದಾಗಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ರಸ್ತೆಯಲ್ಲಿ ಟ್ರಾಫಿಕ್ ಜಾಬ್ ಉಂಟಾಗಿತ್ತು. ಟ್ರಾಫಿಕ್ ಜಾಮ್ ಕ್ಲಿಯರ್ ಮಾಡಿ ಪೊಲೀಸರು ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು. ಈ ಕುರಿತು ಪ್ರಕರಣ ದಾಖಲಿಸಿಕೊಂಡು, ಅಪಘಾತಕ್ಕೆ ನಿಖರ ಕಾರಣ ಏನು ಎಂಬುದರ ಕುರಿತು ತನಿಖೆ ಮುಂದುವರೆಸಿದ್ದಾರೆ.

Comments

Popular posts from this blog

ಶೃಂಗೇರಿ ಮೂಲದ ಮುಸ್ಲಿಂ ಕುಟುಂಬ ಚಲಿಸುತ್ತಿದ್ದ ಕಾರು ಅಪಘಾತ : 3 ಮಕ್ಕಳು ಸೇರಿ ಓರ್ವ ವೃದ್ದೆ ಸಾವು..!

"ದ್ವಿತೀಯ ಪಿಯುಸಿ ವಿದ್ಯಾರ್ಥಿನಿ " ನೇಣು ಬಿಗಿದು ಆತ್ಮಹತ್ಯೆ "

" ಶೃಂಗೇರಿಯಲ್ಲಿ ಭೀಕರ ಅಪಘಾತ "