ಚಿಕ್ಕಮಗಳೂರು ನೂತನ ಎಸ್.ಪಿ ಯಾಗಿ ಜಿತೇಂದ್ರ ಕುಮಾ‌ರ್ ದಯಾಮ ಅಧಿಕಾರ ಸ್ವೀಕಾರ..!

ಚಿಕ್ಕಮಗಳೂರು ನೂತನ ಎಸ್.ಪಿ ಯಾಗಿ ಜಿತೇಂದ್ರ ಕುಮಾ‌ರ್ ದಯಾಮ ಅಧಿಕಾರ ಸ್ವೀಕಾರ..!
ಚಿಕ್ಕಮಗಳೂರು: ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಜಿತೇಂದ್ರ ಕುಮಾರ್ ದಯಾಮ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿಂದೆ ಜಿಲ್ಲಾ ಎಸ್‌ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ವಿಕ್ರಮ್ ಅಮಟೆ ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಜಿತೇಂದ್ರ ಕುಮಾ‌ರ್ ಅವರು ಈ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಚಿಕ್ಕಮಗಳೂರು ಎಸ್‌ಪಿ ಕಚೇರಿಗೆ ಆಗಮಿಸಿದ ನೂತನ ಪೊಲೀಸ್‌ ವರಿಷ್ಠಾಧಿಕಾರಿಗಳನ್ನು ಪೊಲೀಸ್ ಬ್ಯಾಂಡ್ ತಂಡದ ವತಿಯಿಂದ ಗೌರವ ವಂದನೆ ಸಲ್ಲಿಸುವ ಮೂಲಕ ಬರಮಾಡಿಕೊಳ್ಳಲಾಯಿತು.
ಅಧಿಕಾರ ವಹಿಸಿಕೊಂಡ ಜಿತೇಂದ್ರ ಕುಮಾ‌ರ್ ದಯಾಮ ಅವರು ಈ ಹಿಂದೆ ನಕ್ಸಲ್ ನಿಗ್ರಹ ಪಡೆಯ (ANF) ಎಸ್ಪಿಯಾಗಿ ಕಾರ್ಯನಿರ್ವಹಿಸಿದ ದಕ್ಷ ಅನುಭವ ಹೊಂದಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದ ಧರ್ಮಸ್ಥಳದ ಸಾಮೂಹಿಕ ಸಮಾಧಿ ಪ್ರಕರಣದ ತನಿಖಾಧಿಕಾರಿಯಾಗಿಯೂ ಅವರು ಕಾರ್ಯನಿರ್ವಹಿಸಿದ್ದರು.

ಮಲೆನಾಡು ಭಾಗದ ಭೌಗೋಳಿಕತೆ ಮತ್ತು ನಕ್ಸಲ್‌ ಚಟುವಟಿಕೆಗಳ ಬಗ್ಗೆ ಆಳವಾದ ಜ್ಞಾನ ಹೊಂದಿರುವ ಜಿತೇಂದ್ರ ಕುಮಾ‌ರ್ ಅವರ ನೇಮಕವು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಹತ್ವದ ಬದಲಾವಣೆಯನ್ನು ತರುವ ನಿರೀಕ್ಷೆಯಿದೆ.

Comments

Popular posts from this blog

ಶೃಂಗೇರಿ ಮೂಲದ ಮುಸ್ಲಿಂ ಕುಟುಂಬ ಚಲಿಸುತ್ತಿದ್ದ ಕಾರು ಅಪಘಾತ : 3 ಮಕ್ಕಳು ಸೇರಿ ಓರ್ವ ವೃದ್ದೆ ಸಾವು..!

"ದ್ವಿತೀಯ ಪಿಯುಸಿ ವಿದ್ಯಾರ್ಥಿನಿ " ನೇಣು ಬಿಗಿದು ಆತ್ಮಹತ್ಯೆ "

" ಶೃಂಗೇರಿಯಲ್ಲಿ ಭೀಕರ ಅಪಘಾತ "