ರೈತ ಹೋರಾಟಗಾರ ಮೇಲೆ ಪೊಲೀಸರ ಲಾಠಿಚಾರ್ಜ್- ಸೋಮವಾರ ಶೃಂಗೇರಿ ಬಂದ್..!
ರೈತ ಹೋರಾಟಗಾರ ಮೇಲೆ ಪೊಲೀಸರ ಲಾಠಿಚಾರ್ಜ್- ಸೋಮವಾರ ಶೃಂಗೇರಿ ಬಂದ್..! ಚಿಕ್ಕಮಗಳೂರಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟ ಘಟನೆ ಹಾಗೂ ರೈತ ಹೋರಾಟಗಾರರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದನ್ನು ಖಂಡಿಸಿ ಮಲೆನಾಡು ಹಿತರಕ್ಷಣಾ ವೇದಿಕೆ ಸೋಮವಾರ ಶೃಂಗೇರಿ,ಕೊಪ್ಪ,ಎನ್.ಆರ್.ಪುರ ದಲ್ಲಿ ಸ್ವಯಂಪ್ರೇರಿತ ಬಂದ್‌ಗೆ ಕರೆ ನೀಡಿದೆ. ಬಿಜೆಪಿ ಬೆಂಬಲ ಸೂಚಿಸಿದೆ. ಮಹಿಳೆಯ ಮೃತದೇಹ ಸಾಗಿಸುತ್ತಿದ್ದ ವಾಹನ ತಡೆದು ಪ್ರತಿಭಟಿಸಿದ ಗ್ರಾಮಸ್ಥರು, ಸೂಕ್ತ ಪರಿಹಾರಕ್ಕೆ ಆಗ್ರಹಿಸಿದರು. ಶಾಸಕ ರಾಜೇಗೌಡ ಸ್ಥಳಕ್ಕೆ ಬಂದಾಗ ಪ್ರತಿಭಟನಾಕಾರರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಮಾಜಿ ಸಚಿವ ಜೀವರಾಜ್ ಸೇರಿ 30ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಇಲ್ಲಿಯ ಶಾಲಾ ಕಾಲೇಜುಗಳಿಗೆ ರಜೆ ಇರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ.