ನೆರಟೂರು ಗ್ರಾಮ ಪಂ ವ್ಯಾಪ್ತಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ..!

ನೆರಟೂರು ಗ್ರಾಮ ಪಂ ವ್ಯಾಪ್ತಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ..!
ತೀರ್ಥಹಳ್ಳಿ : ತಾಲೂಕಿನ ನೆರಟೂರು ಗ್ರಾಮ
ಪಂಚಾಯಿತಿ ವ್ಯಾಪ್ತಿಯ ಸುರಾನಿ ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಇದು ಸುಮಾರು 3 ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ಸ್ಥಳೀಯರಿಂದ ಲಭ್ಯವಾಗಿದೆ.
ಮೃತಪಟ್ಟ ವ್ಯಕ್ತಿಯನ್ನು ಸುಧೀರ (40) ಎಂದು ಗುರುತಿಸಲಾಗಿದ್ದು ಇವರು ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಹುಣಸವಳ್ಳಿ ಸಮೀಪದ  ಕೋಮನೆ ಯವರು ಎಂದು ತಿಳಿದು ಬಂದಿದೆ. 
ಹೆಂಡತಿ ಮನೆ ನೆರಟೂರು ಆಗಿದ್ದು ಅಲ್ಲಿ ಮನನೊಂದ ಸುಧೀ‌ರ್ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಶವದ ಮರಣೋತ್ತರ ಪರೀಕ್ಷೆಗಾಗಿ ಪಟ್ಟಣದ ಜೆ ಸಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.
        ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Popular posts from this blog

ಶೃಂಗೇರಿ ಮೂಲದ ಮುಸ್ಲಿಂ ಕುಟುಂಬ ಚಲಿಸುತ್ತಿದ್ದ ಕಾರು ಅಪಘಾತ : 3 ಮಕ್ಕಳು ಸೇರಿ ಓರ್ವ ವೃದ್ದೆ ಸಾವು..!

"ದ್ವಿತೀಯ ಪಿಯುಸಿ ವಿದ್ಯಾರ್ಥಿನಿ " ನೇಣು ಬಿಗಿದು ಆತ್ಮಹತ್ಯೆ "

" ಶೃಂಗೇರಿಯಲ್ಲಿ ಭೀಕರ ಅಪಘಾತ "