ಕಾಡಾನೆ ದಾಳಿಗೆ ಮಹಿಳೆ ಬಲಿ: ಯಶಸ್ವಿ ಕಾರ್ಯಾಚರಣೆ ನಡೆಸಿ ಕಾಡಾನೆ ಸೆರೆ ಹಿಡಿದ ಅರಣ್ಯ ಇಲಾಖೆ..!

ಕಾಡಾನೆ ದಾಳಿಗೆ ಮಹಿಳೆ ಬಲಿ: ಯಶಸ್ವಿ ಕಾರ್ಯಾಚರಣೆ ನಡೆಸಿ ಕಾಡಾನೆ ಸೆರೆ ಹಿಡಿದ ಅರಣ್ಯ ಇಲಾಖೆ..!
ಚಿಕ್ಕಮಗಳೂರು: ಕಾಫಿನಾಡು

ಚಿಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಬಲಿಯಾದ ಬೆನ್ನಲ್ಲೇ ತ್ವರಿತವಾಗಿ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆ ಅಧಿಕಾರಿಗಳು, ಯಶಸ್ವಿ ಕಾರ್ಯಾಚರಣೆ ನಡೆಸಿ ನರಹಂತಕ ಕಾಡಾನೆಯನ್ನು ಸೆರೆಹಿಡಿದ್ದ ಘಟನೆ ಫೆ. 22ರ ರವಿವಾರ ಬೆಳಿಗೆ ನಡೆದಿದ್ದು, ಅದರ ವಿವರವಾದ ವರದಿ ಇಲ್ಲಿದೆ.

7 ಸಾಕಾನೆಗಳಿಂದ 2 ಗಂಟೆಗಳ ಸತತ ಕಾರ್ಯಾಚರಣೆ

ಚಿಕ್ಕಮಗಳೂರು ತಾಲೂಕಿನ ಕೆರೆಮನೆ ಹಾಗೂ ಬೆರಣಗೋಡು ಬಳಿ ಈ ಕಾರ್ಯಾಚರಣೆ ನಡೆದಿದೆ. ಕಾಡಾನೆ ಮಹಿಳೆಯ ಮೇಲೆ ದಾಳಿ ನಡೆಸಿದ ಕೇವಲ ಅರ್ಧ ಗಂಟೆಯಲ್ಲೇ ಅರಣ್ಯ ವೈದ್ಯಾಧಿಕಾರಿಗಳಾದೆ ಡಾ. ರಮೇಶ್ ಹಾಗೂ ಡಾ. ಯಶಸ್ವಿ ಅವರ ತಂಡ ಕಾರ್ಯಾಚರಣೆಗಿಳಿದು, ಆನೆಗೆ ಯಶಸ್ವಿಯಾಗಿ ಚುಚ್ಚುಮದ್ದು .
ಸುಮಾರು 70 ಅರಣ್ಯ ಸಿಬ್ಬಂದಿಗಳ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಭೀಮ, ಜ್ಯೂನಿಯರ್ ಅರ್ಜುನ, ಶ್ರೀಕಂಠ ಹಾಗೊ ಭೀಷ್ಮ ಸೇರಿದಂತೆ ಒಟ್ಟು 7 ಸಾಕಾನೆಗಳನ್ನು ಬಳಸಿಕೊಳ್ಳಲಾಗಿತ್ತು.

ಚುಚ್ಚುಮದ್ದು ನೀಡಿದ್ದರೂ ಈ ಚುಚ್ಚುಮದ್ದು ನೀಡಿ ಒಂಟಿ ಸಲಗೆ ತೀವ್ರ ಪ್ರತಿರೋಧ ಒಡ್ಡಿತು. 4 ಸಾಕಾನೆಗಳು ಒಟ್ಟಾಗಿ ತಳ್ಳಿದರೂ ಅಲುಗಾಡದೆ ನಿಂತಿದ್ದ ಕಾಡಾನೆಯನ್ನು, ಸುಮಾರು 2 ಗಂಟೆಗಳ ಸತತ ಪ್ರಯತ್ನದ ಬಳಿಕ ಅಂತಿಮವಾಗಿ ಹಗ ಹಾಕಿ ಸೆರೆಹಿಡಿಯಲಾಯಿತು. ಸೆರೆಹಿಡಿದ ಈ ಕಾಡಾನೆಯನ್ನು ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರಕ್ಕೆ ರವಾನಿಸಲಾಗಿದೆ.

ಮಹಿಳೆ ಸಾವಿಗೆ ಆಕ್ರೋಶ: ರೊಚ್ಚಿಗೆದ್ದ ರೈತ ಸಂಘಟನೆ..!
ಇದೇ ವೇಳೆ, ಕಾಡಾನೆ ದಾಳಿಯಿಂದ ಮಹಿಳೆ ಮೃತಪಟ್ಟಿದ್ದನ್ನು ಖಂಡಿಸಿ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದ ಸಾರ್ವಜನಿಕರು, ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಲು ಯತ್ನಿಸಿದರು. ಈ ಸಂದರ್ಭದಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ತೀವ್ರ ವಾಕ್ಸಮರ ನಡೆಯಿತು.

ಟೈರ್‌ಗೆ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದರು. ಇದರಿಂದ ಮತ್ತಷ್ಟು ಕೆರಳಿದ ಜನರ ಗುಂಪು, ಬಂಧಿತನನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ಪೊಲೀಸರೊಂದಿಗೆ ವಾಗ್ವಾದಕ್ಕಿಳಿಯಿತು. ಈ ವೇಳೆ ಸ್ಥಳದಲ್ಲಿ ಕೆಲಕಾಲ ತೀವ್ರ ನೂಕಾಟ-ತೆಳ್ಳಾಟ ಹಾಗೂ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

Comments

Popular posts from this blog

ಶೃಂಗೇರಿ ಮೂಲದ ಮುಸ್ಲಿಂ ಕುಟುಂಬ ಚಲಿಸುತ್ತಿದ್ದ ಕಾರು ಅಪಘಾತ : 3 ಮಕ್ಕಳು ಸೇರಿ ಓರ್ವ ವೃದ್ದೆ ಸಾವು..!

"ದ್ವಿತೀಯ ಪಿಯುಸಿ ವಿದ್ಯಾರ್ಥಿನಿ " ನೇಣು ಬಿಗಿದು ಆತ್ಮಹತ್ಯೆ "

" ಶೃಂಗೇರಿಯಲ್ಲಿ ಭೀಕರ ಅಪಘಾತ "