ಸೇತುವೆಯಿಂದ ಕೆಳಗೆ ಹಳ್ಳಕ್ಕೆ ಬಿದ್ದ ಖಾಸಗಿ ಬಸ್; 36 ಜನರಿಗೆ ಗಾಯ..!
ಸೇತುವೆಯಿಂದ ಕೆಳಗೆ ಹಳ್ಳಕ್ಕೆ ಬಿದ್ದ ಖಾಸಗಿ ಬಸ್; 36 ಜನರಿಗೆ ಗಾಯ.!!
ನೆನ್ನೆ ಮಧ್ಯಾಹ್ನ 1.30 ರ ಸುಮಾರಿಗೆ ಭದ್ರಾವತಿ ತಾಲ್ಲೂಕಿನ ವೀರಾಪುರ ಗ್ರಾಮದ ಕಾಗೆಹಳ್ಳ ಬಳಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಸೋಮವಾರ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಉರುಳಿ ಬಿದ್ದಿದ್ದು, ಅಪಘಾತದಲ್ಲಿ ಮೂವತ್ತಾರು ಜನ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಮಧ್ಯಾಹ್ನ 1.30 ರ ಸುಮಾರಿಗೆ ಭದ್ರಾವತಿ ತಾಲ್ಲೂಕಿನ ವೀರಾಪುರ ಗ್ರಾಮದ ಕಾಗೆಹಳ್ಳ ಬಳಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.
ಪೊಲೀಸರ ಪ್ರಕಾರ, ದಾವಣಗೆರೆ ಜಿಲ್ಲೆಯ ಚನ್ನಗಿರಿಯಿಂದ ಭದ್ರಾವತಿಗೆ ತೆರಳುತ್ತಿದ್ದ ಖಾಸಗಿ ಬಸ್, ಕಾಗೇಹಳ್ಳದ ಬಳಿ ಬಸ್ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದು, ಸೇತುವೆಯಿಂದ ಹಳ್ಳಕ್ಕೆ ಬಿದ್ದಿದೆ.
Comments
Post a Comment