ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ..!
ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ..!
ಚಿಕ್ಕಮಗಳೂರು' ಜಿಲ್ಲೆಯ ಕಡೂರು ತಾಲೂಕಿನಲ್ಲಿ, ಮದುವೆಗೆ ಸರಿಯಾದ ಸಂಬಂಧ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಕುಮಾರ್ (26) ಎಂಬ ಯುವಕ ಶುಕ್ರವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬ್ರಹ್ಮಸಂದ್ರ ಗ್ರಾಮದ ಕುರಿಗಾಹಿಯಾಗಿದ್ದ ಕುಮಾರ್, ಕಡೂರು ತಾಲೂಕಿನ ಬೋರಗಾನಹಳ್ಳಿ ಬಳಿ ಕುರಿ ಮೇಯಿಸಲು ಬಂದಿದ್ದಾಗ ಈ ಘಟನೆ ನಡೆದಿದೆ. ಹಲವು ಸಮಯದಿಂದ ಮದುವೆಗೆ ಹುಡುಗಿ ಸಿಗದೆ ಮನನೊಂದಿದ್ದ ಕುಮಾರ್, ಕುಡಿದ ಮತ್ತಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಯಗಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments
Post a Comment